ಕಡಬ: ದುಶ್ಚಟಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದಾಗ ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಯೋಜನೆಯಿಂದ ಹಮ್ಮಿಕೊಂಡ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶಿವಪ್ರಸಾದ್ ಮೈಲೇರಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ಕಡಬ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಹಯೋಗದೊಂದಿಗೆ ಕಡಬ ಸರಸ್ವತಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಜೆಸಿಐ ಕಡಬದ ತರಬೇತುದಾರ ಪ್ರದೀಪ್ ಬಾಕಿಲ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಮುಖ್ಯಶಿಕ್ಷಕಿ ಶೈಲಾ ಶ್ರೀ ರೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಡಬ ವಲಯದ ಜನಜಾಗೃತಿ ಸದಸ್ಯೆ ಪಿ.ವೈ ಕುಸುಮಾ, ಕಡಬ ಒಕ್ಕೂಟ ಅಧ್ಯಕ್ಷೆ ನಳಿನಿ ರೈ ಉಪಸ್ಥಿತರಿದ್ದರು. ಕಡಬ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಪ್ರಸ್ತಾವಿಸಿದರು. ಸೇವಾಪ್ರತಿನಿಧಿ ನಳಿನಿ ಸ್ವಾಗತಿಸಿ, ಸುಗುಣ ವಂದಿಸಿದರು. ಶಿಕ್ಷಕಿ ಸೌಮ್ಯಾ ಕೆ. ನಿರೂಪಿಸಿದರು.