More

    ದುಶ್ಚಟಗಳಿಂದ ದೂರವಿರವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೇಲೂರು: ಉತ್ತಮ ಆರೋಗ್ಯವಿದ್ದರೆ ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಯಾರೂ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್ ಹೇಳಿದರು.

    ತಾಲೂಕಿನ ಅರೇಹಳ್ಳಿಯ ಎಸ್.ಮಾನಸ ಪ್ರೌಢಶಾಲೆಯಲ್ಲಿ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ದುಶ್ಚಟಗಳಿಂದ ದೂರವಿರವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮದ್ಯಪಾನ, ಧೂಮಪಾನದಿಂದ ದೂರವಿರುವ ಮೂಲಕ ಮನೆಯಲ್ಲಿ ಒಳ್ಳೆಯ ವಾತಾವರಣವಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಮಾನವ ಸಂಪನ್ಮೂಲಾಧಿಕಾರಿ ವನಿತಾ, ಸ್ವಾತಂತ್ರ್ಯ ಪೂರ್ವದಲ್ಲಿ ನೂರಕ್ಕೆ ಮೂರು ಜನ ಮಾತ್ರ ದುಶ್ಚಟಗಳಿಗೆ ಬಲಿಯಾಗುತ್ತಿದ್ದರು. ಆದರೆ ಈಗ ನೂರಕ್ಕೆ ತೊಂಬತ್ತು ಜನರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ಇದರಿಂದ ದೂರವಿರಬೇಕು ಎಂದರು.

    ಮಾನಸ ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಜಶೇಖರ್, ಗ್ರಾಮಾಭಿವೃದ್ಧಿ ಸಂಸ್ಥೆಯ ಸ್ಥಳೀಯ ಮೇಲ್ವಿಚಾರಕಿ ಅಶ್ವಿನಿ, ಸೇವಾ ಪ್ರತಿನಿಧಿ ರಮ್ಯಾ, ಅಕ್ಷತಾ, ನವ್ಯಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts