ಕಡಬ: ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದೆ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನವಿರಿಸಿ ಉತ್ತಮ ಜೀವನ ನಡೆಸಲು ಪ್ರಯತ್ನಿಸಬೇಕು. ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ತಾನು ಕೆಡುವುದಲ್ಲದೆ, ಇತರರನ್ನು ಕೆಡಿಸುತ್ತಾನೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದ.ಕ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಸವಣೂರು ಪ.ಪೂ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾದ ತಾಲೂಕುಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಯಲ್ಲಿ ಮಾತನಾಡಿದರು.
ಸುಳ್ಯ ಅಟಲ್‌ಜೀ ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿ ರಾಕೇಶ್ ರೈ ಕೆಡೆಂಜಿ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿಯ ಕನಸನ್ನು ನನಸು ಮಾಡುವ ಪ್ರಯತ್ನ ಮಾಡಬೇಕು ಎಂದರು.
ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪದ್ಮಾವತಿ ಎನ್.ಪಿ, ಸವಣೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ರಘು ಬಿ.ಆರ್, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯಾಧ್ಯಕ್ಷ ಕರುಣಾಕರ ಗೋಗಟೆ, ಜನಜಾಗೃತಿ ವೇದಿಕೆಯ ಆಲಂಕಾರು ವಲಯಾಧ್ಯಕ್ಷ ಇಂದು ಶೇಖರ ಶೆಟ್ಟಿ, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಮೊದಲಾದವರು ಉಪಸ್ಥಿತರಿದ್ದರು.
ಕಡಬ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸ್ವಾಗತಿಸಿದರು. ಶಿಕ್ಷಕ ಕಿಶನ್ ಬಿ.ವಿ ಕಾಯಕ್ರಮ ನಿರೂಪಿಸಿದರು. ಸವಣೂರು ವಲಯ ಮೇಲ್ವಿಚಾರಕಿ ವೀಣಾ ಕೆ. ವಂದಿಸಿದರು.
ಚಿತ್ರಕಲಾ ಸ್ಪರ್ಧೆ ತೀರ್ಪುಗಾರರಿಗೆ ಸನ್ಮಾನ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು, ಜೆಸಿಐ ತರಬೇತುದಾರ ಪ್ರದೀಪ್ ಬಾಕಿಲ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ ಚರಣ್ ಪುದು, ಜಗನ್ನಾಥ ಅರಿಯಡ್ಕ ಅವರನ್ನು ಸನ್ಮಾನಿಸಲಾಯಿತು.