

ಮೂಲ್ಕಿ: ನಮ್ಮ ಪರಿಸರ ಹಾಗೂ ನಮ್ಮಲ್ಲಿ ಸ್ವಾಸ್ಥ್ಯ ಸಂಕಲ್ಪಕ್ಕೆ ಸ್ವಚ್ಛತೆ ಪ್ರಮುಖ ಅಸ್ತ್ರವಾಗಿದ್ದು ಶಿಸ್ತು, ಸಂಯಮ ಹಾಗೂ ದುಶ್ಚಟರಹಿತವಾಗಿ ಏಕಾಗ್ರತೆಯಿಂದ ನಡೆಸುವ ಜೀವನ ಸಮೃದ್ಧ ಆರೋಗ್ಯಕ್ಕೆ ಪೂರಕ ಎಂದು ಉಡುಪಿ ಸಮೂಹ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಅರ್ಪಿತಾ ಪ್ರಶಾಂತ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಬಜಪೆ ಮೂಲ್ಕಿ ವಲಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಮೂಲ್ಕಿ ವಿಜಯ ಕಾಲೇಜಿನಲ್ಲಿ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಜಪೆ ತಾಲೂಕು ಯೋಜನಾಧಿಕಾರಿ ಗಿರೀಶ್ ಎಂ., ಮೂಲ್ಕಿ ವಲಯ ಜನಜಾಗೃತಿ ವಲಯ ಅಧ್ಯಕ್ಷ ವಿನೋದ್ ಸಾಲ್ಯಾನ್, ಒಕ್ಕೂಟ ಅಧ್ಯಕ್ಷೆ ಜಯಲಕ್ಷ್ಮ್ಮಿ, ಮೂಲ್ಕಿ ಪಪೂ ಕಾಲೇಜು ಪ್ರಾಂಶುಪಾಲ ಪ್ರೊ.ಅರುಣ್‌ಕುಮಾರ್ ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟೇಶ್ ಭಟ್, ಯೋಜನೆ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ, ಸೇವಾ ಪ್ರತಿನಿಧಿ ರಾಜೀವಿ ಉಪಸ್ಥಿತರಿದ್ದರು.