More

  ಸ್ವತಂತ್ರೃ ಹೋರಾಟಗಾರ ಭಗತ್‌ಸಿಂಗ್ ಕುರಿತು ಪ್ರಬಂಧ ಸ್ಪರ್ಧೆ ನಾಳೆ

  ಸಿಂಧನೂರು: ನಗರದ ಶಂಕರ್‌ಟ್ರಸ್ಟ್ ಕಾಲೇಜ್‌ನಲ್ಲಿ ಅ.8 ರಂದು ಭಗತ್ ಸಿಂಗ್ ಕುರಿತು ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು ತಾಲೂಕಿನ ಎಲ್ಲ ಪದವಿ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬೇಕೆಂದು ಸಿಂಧನೂರು ಗೆಳೆಯರ ಬಳಗ ಸಂಘಟನೆಯ ಅಧ್ಯಕ್ಷ ಸೈಯದ್ ಬಂದೇನವಾಜ ತಿಳಿಸಿದರು.

  ಇದನ್ನೂ ಓದಿ: ಪ್ರಬಂಧ ಸ್ಪರ್ಧೆ: ರಕ್ಷಿತಾ ರಾಜ್ಯಮಟ್ಟಕ್ಕೆ ಆಯ್ಕೆ

  ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಭಾರತ ಸ್ವತಂತ್ರೃ ಸಂಗ್ರಾಮದ ಕ್ರಾಂತಿಕಾರಿ ಭಗತ್‌ಸಿಂಗ್ ಜಯಂತಿಯನ್ನು ವಿಶಿಷ್ಟವಾಗಿ, ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಿದ್ದು,

  ಇಂದಿನ ಯುವ ಪೀಳಿಗೆಗೆ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರ ಹಾಗೂ ಸ್ವತಂತ್ರ್ಯ ಹೋರಾಟಗಾರರ ವಿಚಾರವನ್ನು ಮತ್ತು ಅವರು ಸಾರಿದ ಸಂದೇಶವನ್ನು ತಿಳಿಸುವ ನಿಟ್ಟಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆಂದರು.

  ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅತ್ಯುತ್ತಮ ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ಸ್ಪರ್ಧಾರ್ಥಿಗಳಿಗೆ ಪ್ರಶಂಸೆ ಪತ್ರ ನೀಡಲಾಗುವುದು. ಯಾವುದೇ ಶುಲ್ಕ ಇರುವುದಿಲ್ಲ, ಹೆಚ್ಚಿನ ಸಂಖ್ಯೆಯಲ್ಲಿ ಡಿಗ್ರಿ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡಿದರು.

  ರಾಜ್ಯೋತ್ಸವ ರಸಪ್ರಶ್ನೆ - 21

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts