ವಿದ್ಯಾರಣ್ಯಪುರದಲ್ಲಿ ಸ್ವಯಂವರ ಪಾರ್ವತಿ ಯಾಗ: 27ರಂದು ಮಂಜುನಾಥಸ್ವಾಮಿ ದೇಗುಲದಲ್ಲಿ ಆಯೋಜನೆ, ವಿವಾಹ ತೊಡಕುಗಳಿಗೆ ಪರಿಹಾರ ಭಾಗ್ಯ

Swayamvara Yaga
Published on

ಬೆಂಗಳೂರು: ವಿದ್ಯಾರಣ್ಯಪುರದಲ್ಲಿರುವ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ 27ರಂದು ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಹಾಗೂ ಕನ್ನಡ ಮ್ಯಾಟ್ರಿಮೊನಿ ಸಹಯೋಗದಲ್ಲಿ ‘ಸ್ವಯಂವರ ಪಾರ್ವತಿ ಯಾಗ’ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಯಾಗ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಂಡವರಿಗೆ ವಿವಾಹ ತೊಡಕುಗಳು ನಿವಾರಣೆಯಾಗಲಿದೆ. ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಯಾಗದಿಂದ ಕಂಕಣಬಲ: ಸ್ವಯಂವರ ಪಾರ್ವತಿ ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು ಮತ್ತು ವರರಿಗೆ ಅತಿ ಶೀಘ್ರವಾಗಿ ಕಂಕಣ ಭಾಗ್ಯ ಕೂಡಿ ಬರುವ ನಂಬಿಕೆ ಇದೆ. ಪುರಾಣಗಳ ಪ್ರಕಾರ, ಸ್ವಯಂವರ ಮಂತ್ರ ಉಪದೇಶದ ನಂತರ ಶಿವ-ಪಾರ್ವತಿ ಯಾಗ ಮಹತ್ವ ಪಡೆದಿದೆ. ಪೂರ್ವಜನ್ಮದ ದೋಷಗಳಿಂದಲೂ ಮದುವೆ ವಿಳಂಬ ಆಗುತ್ತಿರುತ್ತದೆ. ಯಾಗ ಮಾಡಿದರೆ ಎಲ್ಲ ದೋಷಗಳು ಪರಿಹಾರಗೊಳ್ಳುತ್ತವೆ. ಭಾವೀ ವಧು-ವರರು ಮಾತ್ರವಲ್ಲ, ಸಂಸಾರದಲ್ಲಿ ನೆಮ್ಮದಿ ಇಲ್ಲದವರೂ ಯಾಗದಲ್ಲಿ ಪಾಲ್ಗೊಳ್ಳುವ ಮೂಲಕ ಶಾಂತಿ ಹೊಂದಬಹುದಾಗಿದೆ.

ಇದನ್ನೂ ಓದಿ: ಚಂದ್ರನ ಮೇಲೆ ಲ್ಯಾಂಡ್​ ಆಗುವ ಮುನ್ನವೇ ತಮಿಳುನಾಡಿನ ನಾಮಕ್ಕಲ್​ ಮಣ್ಣಿನ ಮೇಲೆ ಚಂದ್ರಯಾನ 3 ನೌಕೆ ಇಳಿದಿತ್ತು! ಪೌರಾಣಿಕ ಹಿನ್ನೆಲೆ: ಪರಮೇಶ್ವರನೊಂದಿಗೆ ಪಾರ್ವತಿ ಜಗಳ ಮಾಡಿಕೊಂಡು ಭೂಲೋಕಕ್ಕೆ ಬರುತ್ತಾಳೆ. ಆಗ ಪಾರ್ವತಿಯನ್ನು ಮರೆತ ಶಿವನು ಏಕಾಂತಕ್ಕೆ ಹೊರಟು ಹೋಗುತ್ತಾನೆ. ಇದರಿಂದ ಲಯಕಾರ್ಯಗಳೆಲ್ಲ ಅಸ್ತವ್ಯಸ್ತವಾಗುತ್ತವೆ. ಈ ಪರಿಸ್ಥಿತಿ ಅರಿತ ಋಷಿ ಮುನಿಗಳು ಹಾಗೂ ದೇವತೆಗಳು ಪ್ರಾರ್ಥನೆ ಮೂಲಕ ಶಿವನನ್ನು ಎಚ್ಚರಿಸಲು ಪ್ರಯತ್ನಿಸುತ್ತಾರೆ. ಇತ್ತ ಭೂಲೋಕ ದಲ್ಲಿದ್ದ ಪಾರ್ವತಿ ಶಿವಲಿಂಗ ರಚಿಸಿ ತಪಸ್ಸು ಮಾಡುತ್ತಿರುತ್ತಾಳೆ. ಈ ವೇಳೆ ನಾರದರು ಆಗಮಿಸಿ ಸ್ವಯಂವರ ಮಂತ್ರ ಉಪದೇಶಿಸುತ್ತಾರೆ. ಪಾರ್ವತಿ ಈ ಮಂತ್ರವನ್ನು ಜಪಿಸಿದಾಗ ಶಿವನು ಎಚ್ಚರ ಗೊಂಡು ಭೂಲೋಕಕ್ಕೆ ಆಗಮಿಸುತ್ತಾನೆ. ನಂತರ ಪಾರ್ವತಿಯನ್ನು ವಿವಾಹವಾಗಿ ಕೈಲಾಸಕ್ಕೆ ಕರೆದೊಯ್ಯುತ್ತಾನೆ. ಕೆಲವರಿಗೆ ಪೂರ್ವಜನ್ಮದ ಯಾವುದೋ ದೋಷಗಳು ವಿವಾಹ ಕಾರ್ಯಕ್ಕೆ ಅಡ್ಡಿ ಉಂಟು ಮಾಡುತ್ತಿರುತ್ತವೆ. ಅಂಥವರು ಪಾರ್ವತಿ ಸ್ವಯಂವರ ಹೋಮ ಮಾಡಿಸಿ, ಪ್ರಸಾದ ಸ್ವೀಕರಿಸಿದರೆ ವಿವಾಹವಾಗುತ್ತದೆ ಎಂಬ ನಂಬಿಕೆ ಇದೆ.

ಮರೆಯದೆ ಜಾತಕ ತನ್ನಿ

ಸ್ವಯಂವರ ಪಾರ್ವತಿ ಯಾಗದಿಂದ ಜೀವನ ಸಂಗಾತಿ ಶೀಘ್ರ ದೊರಕಲು ಅನುವಾಗುತ್ತದೆ. ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು-ವರರು ತಮ್ಮ ಭಾವಚಿತ್ರದೊಂದಿಗೆ ಜಾತಕ ವನ್ನು ತರುವಂತೆ ಕೋರಲಾಗಿದೆ. https://bit.ly/3MZlw2B ಯಲ್ಲಿ ಹೆಸರು ನೋಂದಾಯಿಸಿ. ಉಚಿತ ಹಾಗೂ ವಿಶೇಷ ಪೂಜೆ, ಸಂಕಲ್ಪ ಮತ್ತು ಪ್ರಸಾದಕ್ಕಾಗಿ ಮ್ಯಾಟ್ರಿ ಐಡಿಯನ್ನು ತೋರಿಸಬೇಕು. ವಿವರಗಳಿಗೆ ಮೊ.: 75388 06555 ಸಂರ್ಪಸಬಹುದು.

ಸ್ಥಳ

ವಿದ್ಯಾರಣ್ಯಪುರ ಸಾಂಸ್ಕೃತಿಕ ಕೇಂದ್ರ (ರಿ), ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ನಂ.11, 8ನೇ ಮುಖ್ಯರಸ್ತೆ, 4ನೇ ಬ್ಲಾಕ್, ಬಿ.ಐ.ಎಲ್.ಬಡಾವಣೆ, ವಿದ್ಯಾರಣ್ಯಪುರ, ಬೆಂಗಳೂರು - 560097

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net