More

    ಸ್ವೀಪ್ – ಚುನಾವಣಾ ರಾಯಭಾರಿಗಳ ನೇಮಕ

    ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್)  ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ  ಮೈಸೂರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಮುಖ್ಯ ಚುನಾವಣಾಧಿಕಾರಿಗಳು ರಾಯಭಾರಿಗಳನ್ನಾಗಿ ಆಯ್ಕೆ ಮಾಡಿರುತ್ತಾರೆ.

    ಅದರಂತೆ ಮಾಡೆಲಿಂಗ್ ಕ್ಷೇತ್ರದ ತನಿಷ್ಕಾ ಮೂರ್ತಿ, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಚಿತ್ರಗಾರರಾದ ಬಿ.ಎಸ್.ಕೃಪಾಕರ್ ಹಾಗೂ ಕೆ.ಸೇನಾನಿ ಅವರನ್ನು ಚುನಾವಣಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದ್ದು, ಇವರು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳುವ ಮತದಾನ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮತದಾರರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಲಿದ್ದಾರೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts