More

    ಮತದಾನ ಜಾಗೃತಿ ಅಭಿಯಾನ


    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮತದಾರರ ಜಾಗೃತಿ ಅಭಿಯಾನ ಮಂಗಳವಾರ ನಡೆಯಿತು.


    ಪಂಚಾಯತಿ ಎದುರು ಮತದಾನದ ಪ್ರತಿಜ್ಞೆ ಬೋಧಿಸಲಾಯಿತು. ಮಂಗಳೂರು ತಾ.ಪಂ. ಸಹಾಯಕ ನಿರ್ದೇಶಕ ಅಬೂಬಕ್ಕರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.


    ಬಳಿಕ ಮಾತನಾಡಿದ ಅವರು, ಮತದಾನ ಮಾಡುವುದು ನಮ್ಮ ಹಕ್ಕು, ಒಂದು ಮತದಿಂದ ಯಾವುದೇ ವ್ಯತ್ಯಾಸವಾಗದು ಎಂದು ಮತದಾನ ಮಾಡದಿದ್ದರೆ, ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅವಕಾಶವನ್ನು ನಾವು ಕಳೆದು ಕೊಂಡಂತಾಗುತ್ತದೆ. ಆದ್ದರಿಂದ ಮೇ 10ರಂದು ಮತದಾನ ಮಾಡಿ ಎಂದರು.


    ಸ್ವೀಪ್ ಸಮಿತಿ ಸದಸ್ಯ ಡೊಂಬಯ್ಯ ಇಡ್ಕಿದು ಮಾತನಾಡಿ ಮತದಾನದ ಮಹತ್ವ ವಿವರಿಸಿದರು. ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ತಾ.ಪಂ. ವ್ಯವಸ್ಥಾಪಕರಾದ ಸುವರ್ಣ, ಸ್ವೀಪ್ ಸಮಿತಿ ಸದಸ್ಯರು, ಶಿಕ್ಷಕರು, ಸ್ವಸಹಾಯ ಸಂಘದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts