More

    ಮಧ್ಯಂತರ ಬಜೆಟ್​ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ಭರವಸೆ ನೀಡುತ್ತದೆ: ಪ್ರಧಾನಿ ಮೋದಿ

    ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿದ ಮಧ್ಯಂತರ ಬಜೆಟ್​ ಎಲ್ಲರನ್ನು ಒಳಗೊಳ್ಳುವ ಮತ್ತು ಹೊಸತನದ ಬಜೆಟ್​ ಆಗಿದೆ ಎಂದು ಪ್ರಧಾನಿ ಮೋದಿ ಅವರು ಪ್ರಶಂಸಿಸಿದರು.

    ಬಜೆಟ್​ ಮಂಡನೆ ಬೆನ್ನಲ್ಲೇ ಅಭಿಪ್ರಾಯ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಇಂದಿನ ಬಜೆಟ್​ ವಿಕಸಿತ ಭಾರತದ ನಾಲ್ಕು ಆಧಾರಸ್ತಂಭಗಳಾದ ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಸಬಲೀಕರಣಗೊಳಿಸಲಿದೆ. ಅಲ್ಲದೆ, ಈ ಬಜೆಟ್ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ನೀಡುತ್ತದೆ ಎಂದರು.

    ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಬಜೆಟ್‌ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂಪಾಯಿಗಳ ನಿಧಿಯನ್ನು ಘೋಷಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಬಂಡವಾಳ ವೆಚ್ಚಕ್ಕೆ ಐತಿಹಾಸಿಕ ಗರಿಷ್ಠ 11,11,111 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.

    ಈ ಬಜೆಟ್ ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಗುರಿಯ ಜತೆಗೆ ಹೊಸ ಉದ್ಯೋಗಾವಕಾಶಗಳ ಸೃಷ್ಟಿಗೆ ಒತ್ತು ನೀಡುತ್ತದೆ. ಬಡವರಿಗೆ ಹೆಚ್ಚುವರಿಯಾಗಿ 2 ಕೋಟಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಿಸಲಾಗಿದೆ. ನಾವೀಗ 3 ಕೋಟಿ ‘ಲಖಪತಿ ದೀದಿಗಳನ್ನು’ ಹೊಂದುವ ಗುರಿ ಹೊಂದಿದ್ದೇವೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದರು.

    ಆದಾಯ-ತೆರಿಗೆ ಪರಿಹಾರ ಯೋಜನೆಯು ಮಧ್ಯಮ ವರ್ಗದ 1 ಕೋಟಿ ಜನರಿಗೆ ಪರಿಹಾರವನ್ನು ನೀಡುತ್ತದೆ. ಈ ಬಜೆಟ್‌ನಲ್ಲಿ ರೈತರಿಗಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೋದಿ ಕೊಂಡಾಡಿದರು. (ಏಜೆನ್ಸೀಸ್​)

    ಅತ್ಯಂತ ಕಡಿಮೆ ಅವಧಿಯಲ್ಲಿ ಬಜೆಟ್​ ಮಂಡನೆ! ಇಲ್ಲಿದೆ ವಿತ್ತ ಸಚಿವರ ಹಿಂದಿನ ದಾಖಲೆಗಳ ಕಂಪ್ಲೀಟ್​ ವಿವರ…

    ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ; ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts