ಸ್ವಿಗ್ಗಿಯಲ್ಲಿ 1,100 ಸಿಬ್ಬಂದಿಗೆ ಕತ್ತರಿ

page 9 4
Published on

ನವದೆಹಲಿ: ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿ 1,100 ಕೆಲಸಗಾರರನ್ನು ತೆಗೆದುಹಾಕಿರುವುದಾಗಿ ತಿಳಿಸಿದೆ. ಲಾಕ್ಡೌನ್ನಿಂದಾಗಿ ಆಥಿರ್ಕ ಸಮಸ್ಯೆ ಎದುರಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ದೆಹಲಿ, ಬೆಂಗಳೂರು ಸೇರಿದಂತೆ ಅನೇಕ ಪ್ರಮುಖ ನಗರಗಳಲ್ಲಿರುವ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದ ಶೇ.13 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಇದು ಅತ್ಯಂತ ಕಠಿಣ ನಿರ್ಧಾರ, ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ಮೂರು ತಿಂಗಳ ಸಂರ್ಪಣ ಸಂಬಳ ನೀಡಲಾಗುವುದು. ಅವರಿಗೆ ಬೇರೆ ಉದ್ಯೋಗ ಸಿಗುವವರೆಗೂ ವರ್ಷದಲ್ಲಿ ಒಂದು ತಿಂಗಳ ಸಂಬಳವನ್ನು ಅವರ ಖಾತೆಗೆ ಜಮಾ ಮಾಡಲಾಗುವುದು. ಆರೋಗ್ಯ ವಿಮೆಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗುವುದು. ೋನ್ ಕರೆ ಮೂಲಕ ಯಾವ ಸಿಬ್ಬಂದಿ ಕೆಲಸ ಕಳೆದುಕೊಂಡಿದ್ದಾರೆ ಎನ್ನುವುದನ್ನು ತಿಳಿಸಲಾಗವುದು ಎಂದು ಸಂಸ್ಥೆಯ ಮುಖ್ಯಸ್ಥ ]ೕಹರ್ಷ ಮೆಜೆಟಿ ತಿಳಿಸಿದ್ದಾರೆ. ಈ ಹಿಂದೆ ಜೊಮ್ಯಾಟೊ ಕೂಡ ಸಂಸ್ಥೆಯ ಶೇ.13 ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net