More

    ಸೆಪ್ಟೆಂಬರ್ 3 ರಂದು ಈಜುಕೊಳ ಸಚಿವ ಬಿ. ನಾಗೇಂದ್ರ ಅವರಿಂದ ಉದ್ಘಾಟನೆ

    ಗದಗ: ಗದಗ ಕಳಸಾಪುರ ರಸ್ತೆಯ ನಂದಿಶ್ವರ ನಗರದ ಒಳಾಂಗಣ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈಜುಕೊಳವನ್ನು ಸೆಪ್ಟೆಂಬರ್ 3 ರಂದು ಯುವಜನ ಸಬಲೀಕರಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

    ಮಂಗಳವಾರ ನಂದೀಶ್ವರ ನಗರದ ಈಜುಕೊಳ ಕಾಮಗಾರಿ ವೀಕ್ಷಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 1.68 ಕೋಟಿ ರೂ. ವೆಚ್ಚದಲ್ಲಿ ನಗರಸಭೆಯಿಂದ ಎಸ್‍ಎಫ್‍ಸಿ ಯೋಜನೆಯ ಎಸ್‍ಸಿಎಸ್‍ಟಿ ಅನುದಾನದಡಿ ಈಜುಕೊಳ ನಿರ್ಮಾಣಗೊಂಡಿದೆ. ಗದಗ ನಗರದಲ್ಲಿ ಈಗಾಗಲೇ 3 ಈಜುಕೊಳಗಳು ಸಾರ್ವಜನಿಕರಿಗೆ ಲಭ್ಯವಿದ್ದು ಇದು 4 ನೇಯ ಈಜುಕೊಳವಾಗಿದೆ.ನಂದೀಶ್ವರ ನಗರದ ಸಾರ್ವಜನಿಕರಿಗೆ ಯುವಜನತೆಗೆ ಈ ಈಜುಕೊಳ ಸಹಕಾರಿಯಾಗಿದೆ ಎಂದರು.

    ಮುಂದಿನ ಒಂದು ತಿಂಗಳೊಳಗಾಗಿ ಇನ್ನೊಂದು ಈಜುಕೊಳ ಕಾಮಗಾರಿ ಪೂರ್ಣಗೊಳ್ಳಲಿದ್ದು ಅದೂ ಸಹ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಈ ಈಜುಕೊಳ ಸದ್ಭಳಕೆ ಮಾಡಿಕೊಂಡು ರಾಜ್ಯ, ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ ಜಿಲ್ಲೆಯ ಯುವ ಸಮುದಾಯ ಹೆಸರು ಮಾಡಬೇಕು. ಈ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
    ರಾಷ್ಟ್ರದಲ್ಲಿಯೇ ಅಚ್ಚರಿ ಮೂಡಿಸಿದಂತಹ, ಹೆಣ್ಣು ಮಕ್ಕಳು ಸಮಾಜದಲ್ಲಿ ಆರ್ಥಿಕ ಸ್ವಾವಲಂಭನೆ ತರುವಂತಹ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ ಆಗಸ್ಟ 30 ರಂದು  ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಮೈಸೂರಿನಲ್ಲಿ ಚಾಲನೆ ನೀಡಲಿದ್ದು ಅದೇ ದಿನ ಗದಗ ನಗರದ ಪಂ.ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ ಜಿಲ್ಲಾ ಮಟ್ಟದಲ್ಲಿ ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಲಾಗುವದು ಎಂದರು.  

    ಸರ್ಕಾರದ ಮಹಾತ್ವಾಕಾಂಕ್ಷೆ ಗ್ಯಾರಂಟಿ ಯೋಜನೆ ಜಾರಿಯಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಸ್ವಾಭಿಮಾನದ ಜೀವನ ನಡೆಸಲು ಮುನ್ನುಡಿ ದೊರಕಿದಂತಾಗುತ್ತದೆ. ಅಲ್ಲದೇ ಬಡಕುಟುಂಬಗಳ ಆರ್ಥಿಕ ಅಡಚಣೆ ನಿವಾರಣೆಗೆ ತುಂಬಾ ಉಪಯುಕ್ತವಾಗಿದ್ದು. ಈ ಯೋಜನೆ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಕುಟುಂಬಗಳಿಗೆ ವಾರ್ಷಿಕ 50-60 ಸಾವಿರ ಆರ್ಥಿಕ ಸಹಾಯ ದೊರೆಯುತ್ತದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದ 1.4 ಕೋಟಿ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲಿವೆ ಇದೊಂದು ಕ್ರಾಂತಿಕಾರಕ ಬೆಳವಣಿಗೆಯಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಇಂದಿರಾ ಗಾಂಧಿಯವರ ಬಡತನ ನಿರ್ಮೂಲನೆಯ ಕನಸು ಈಡೇರಿದಂತಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

    ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣಗು ಗೊಗೇರಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ, ಪ್ರಭು ಬುರಬುರೆ, ಸಿದ್ದು ಪಾಟೀಲ ಸೇರಿದಂತೆ  ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಹಿರಿಯರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts