ಗಡಿಯಲ್ಲಿ ಕನ್ನಡ ಕಟ್ಟುವ ಕೆಲಸವಾಗಲಿ: ಗುರುಸಿದ್ದ ಸ್ವಾಮೀಜಿ

blank

ಲಿಂಗಾಯತ ಮಹಿಳಾ ಸಮಾಜದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳಗಾವಿ: ಶ್ರೀಮಂತ, ಸರ್ವಶ್ರೇಷ್ಠ ಭಾಷೆಯಾಗಿರುವ ಕನ್ನಡವನ್ನು ಉದ್ಯೋಗ, ವಿಚಾರಧಾರೆಗಳ ಕೂಡ ವ್ಯವಹಾರ ನಡೆಸಯಬೇಕು. ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ ಎಂದು ಪೂಜ್ಯ ಶ್ರೀ ಮ.ನಿ.ಪ್ರ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು.

ಇಲ್ಲಿನ ನೆಹರು ನಗರದ ಕನ್ನಡ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಶುಕ್ರವಾರ ನ.29 ರಂದು ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಜೃಭಂಣೆಯಯಿಂದ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿ,

ಎಲ್ಲಾ ಭಾಷೆಯನ್ನು ಪ್ರೀತಿಸಿ ಆದರೆ ಕನ್ನಡ ಭಾಷೆ ಉಳಿಸಿ, ಬೆಳೆಸಿ. ಕನ್ನಡ ಭಾಷೆಯಲ್ಲಿ ಅನ್ಯ ಭಾಷೆಗಳು ಹೊಕ್ಕು, ಕನ್ನಡ ನುಂಗಿ ಹಾಕುತ್ತಿವೆ. ಇದರಿಂದ ನಮ್ಮ ಕನ್ನಡ ಸಂಸ್ಕೃತಿ ಬಿಟ್ಟು ಬೇರೆ ಭಾಷೆಗಳ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವ ಪ್ರತಿಜ್ಞೆ ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದರು.

ಅನುಷಾ ಕರಿಬಸಯ್ಯ ಹಿರೇಮಠ ಮಾತನಾಡಿ, ಮಕ್ಕಳು ದೇಶದ ಆಸ್ತಿ,ಅವರಿಗೆ ಸಂಸ್ಕಾರ, ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಜವಾಬ್ದಾರಿಯಾಗಿದೆ ಎಂದರು.

ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಲಿಂಗಾಯತ ಮಹಿಳಾ ಸಮಾಜ ಅಧಕ್ಷೆ ಸುನೀತಾ ಪಾಟೀಲ ಸ್ವಾಗತಿಸಿದರು. ಶೋಭಾ ಪಾಟೀಲ, ರಾಜೇಶ್ವರಿ ಹಿರೇಮಠ, ಸಾಹಿತಿ ಯ. ರು . ಪಾಟೀಲ, ಸಂಸ್ಥಾಪಕಿ ಶೈಲಜಾ ಭಿಂಗೆ, ಜಯಶೀಲಾ ಬ್ಯಾಕೋಡ್‌ , ಶೈಲಾ ಪಾಟೀಲ, ಜ್ಯೋತಿ ಬದಾಮಿ, ಸುರೇಖಾ ಮಾನ್ವಿ, ಹಾಗೂ ಇತರರು ಇದ್ದರು. ಶಾರದಾ ಪಾಟೀಲ ಹಾಗೂ ಅನುಪಮಾ ನಿರೂಪಿಸಿದರು. ಸಹ ಕಾರ್ಯದರ್ಶಿ ವಿದ್ಯಾ ಗೌಡರ ವಂದಿಸಿದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…