More

    ಜಾಗತಿಕ ನಾಯಕತ್ವಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಅಗತ್ಯ ; ನ್ಯಾಕ್ ನಿರ್ದೇಶಕ ಡಾ.ಎಸ್.ಸಿ.ಶರ್ಮಾ ಅಭಿಮತ ; ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ 11ನೇ ಘಟಿಕೋತ್ಸವ

    ತುಮಕೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿರುವ ವಾತಾವರಣ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಿಂದಿನಿಂದಲೂ ಇದೆ, ಅದಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಅವರಿಗಿದ್ದ ದೂರದೃಷ್ಟಿ ಕಾರಣ ಎಂದು ನ್ಯಾಕ್ ನಿರ್ದೇಶಕ ಡಾ.ಎಸ್.ಸಿ. . ಶರ್ಮಾ ಅಭಿಪ್ರಾಯಪಟ್ಟರು.

    ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬಿರ್ಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 11ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದರು. ಜಾಗತಿಕ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅವಶ್ಯಕವಾಗಿದ್ದು, ಪರಿಣಾಮಕಾರಿಯಾಗಿರುವ ಈ ನೀತಿ ರಾಷ್ಟ್ರವನ್ನು ಹೊಸದಿಕ್ಕಿಗೆ ಕೊಂಡೊಯ್ಯಲಿದೆ ಎಂದರು.

    ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಯುವ ಸಮುದಾಯದಲ್ಲಿ ಕೌಶಲಾಭಿವೃದ್ಧಿಗೆ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕಂತೆ ಕೌಶಲ ದೊರೆಯಲಿದೆ. ಭಾರತೀಯ ಶಿಕ್ಷಣ ಸಂಸ್ಕೃತಿಗೆ ಜಾಗತಿಕ ಮನ್ನಣೆ ಇದೆ, ಪದವಿ ಪಡೆದಿರುವ ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆ ನೀಡುವ ಕಡೆ ಶ್ರಮಿಸುವಂತಾಗಬೇಕು ಎಂದರು.

    ಘಟಿಕೋತ್ಸವದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಸಿದ್ಧಗಂಗಾ ಮಠಾಧೀಶರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕರೊನಾ ಎಲ್ಲ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದ್ದು, ಇದಕ್ಕೆ ಶಿಕ್ಷಣ ರಂಗವೂ ಹೊರತಾಗಿಲ್ಲ, ಕರೊನಾದಿಂದಾಗಿ ಆನ್‌ಲೈನ್ ಶಿಕ್ಷಣ ಸೇರಿ ಹೊಸ ಕಲಿಕಾ ವಾರ್ಗಗಳತ್ತ ಚಿಂತಿಸುವಂತಹ ಪರಿಸ್ಥಿತಿ ನಿರ್ವಾಣವಾಗಿದೆ, ಪದವಿ ಶಿಕ್ಷಣ ಪಡೆಯುವ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಿದ್ದು, ಉದ್ಯಮ ಸೇರಿ ಎಲ್ಲ ರಂಗಗಳಲ್ಲಿಯೂ ಮಹಿಳೆಯರು ಮುಂದೆ ಬರಬೇಕು ಎಂದು ಸಲಹೆಯಿತ್ತರು.

    ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್‌ಐಟಿ ಕಾಲೇಜಿನಲ್ಲಿ ಪೂರಕ ವಾತಾವರಣ ಕಲ್ಪಿಸಲಾಗಿದ್ದು, ದೇಶದಲ್ಲಿ ತಾಂತ್ರಿಕ ಶಿಕ್ಷಣ ಪಡೆಯುವವರ ಪ್ರವಾಣ ಶೇ.50ಕ್ಕೆ ಹೆಚ್ಚಬೇಕು, ಉದ್ಯಮ, ಉದ್ದಿಮೆ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಭಾಗವಹಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕು ಎಂದರು.

    ಎಸ್‌ಐಟಿ ಕಾಲೇಜಿನಲ್ಲಿ ಓದಿರುವ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ರಾಜಕಾರಣ, ಸವಾಜಸೇವೆ, ಮಾಹಿತಿ ತಂತ್ರಜ್ಞಾನ ಹೀಗೆ ಹಲವು ಕ್ಷೇತ್ರಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ವಾಡಿದ್ದಾರೆ. ಅಂತಹ ಸಾಧಕರ ಸ್ಫೂರ್ತಿಯನ್ನು ವಿದ್ಯಾರ್ಥಿಗಳು ಹೊಂದುವ ಮೂಲಕ ಸವಾಜಕ್ಕೆ ಮರಳಿ ನೀಡುವ ಪರಂಪರೆ ರೂಢಿಸಿಕೊಳ್ಳಬೇಕು ಎಂದರು. ಸಿದ್ಧಗಂಗಾ ವಿದ್ಯಾಸಂಸ್ಥೆ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ, ಎಸ್‌ಐಟಿ ನಿರ್ದೇಶಕ ಡಾ.ಎಂ.ಎನ್.ಚನ್ನಬಸಪ್ಪ, ಸಿಇಒ ಡಾ.ಶಿವಕುಮಾರಯ್ಯ, ಪ್ರಾಂಶುಪಾಲ ಡಾ.ಎಸ್.ವಿ.ದಿನೇಶ್ ಮತ್ತಿತರರು ಇದ್ದರು.

    ಹುಸ್ನಿಯಾಖಾನಂಗೆ ಡಾ.ಶಿವಕುವಾರ ಸ್ವಾಮೀಜಿ ಚಿನ್ನದ ಪದಕ : 11ನೇ ಟಿಕೋತ್ಸವದಲ್ಲಿ ಇಂಡಸ್ಟ್ರೀಯಲ್ ಇಂಜಿನಿಯರ್ ಮತ್ತು ವ್ಯಾನೇಜ್ಮೆಂಟ್ ವಿಭಾಗದ ಹುಸ್ನೀಯಾ ಖಾನಂ ಡಾ.ಶಿವಕುಮಾರ ಸ್ವಾಮೀಜಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಕರೊನಾ ಮಾರ್ಗಸೂಚಿ ಪಾಲನೆಯೊಂದಿಗೆ ಸರಳವಾಗಿ ನಡೆದ ಘಟಿಕೋತ್ಸವದಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಪೋಷಕರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts