More

    ನೈಋತ್ಯ ರೈಲ್ವೆಯಿಂದ ಗಾಂಧೀಜಿ ಜಯಂತಿ

    ಹುಬ್ಬಳ್ಳಿ : ನೈಋತ್ಯ ರೈಲ್ವೆ ವಲಯ ಮತ್ತು ಹುಬ್ಬಳ್ಳಿ ರೈಲ್ವೆ ವಿಭಾಗದ ವತಿಯಿಂದ ಎಸ್​ಎಸ್​ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸೋಮವಾರದಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಿಸಲಾಯಿತು.

    ನೈಋತ್ಯ ರೈಲ್ವೆ ವಲಯದಾದ್ಯಂತ ಸೆ. 16 ರಿಂದ ಆರಂಭಿಸಿದ್ದ ಸ್ವಚ್ಛತಾ ಪಾಕ್ಷಿಕ ಅಭಿಯಾನದ ಕೊನೆಯ ದಿನವಾದ ಸೋಮವಾರದಂದು ಸೇವಾ ದಿನವನ್ನೂ ಆಚರಿಸಲಾಯಿತು.

    ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ, ಅಪರ ಪ್ರಧಾನ ವ್ಯವಸ್ಥಾಪಕ ಯು. ಸುಬ್ಬಾರಾವ, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ ಮತ್ತಿತರ ಅಧಿಕಾರಿಗಳು ಗಾಂಧೀಜಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

    ಕೇಂದ್ರೀಯ ವಿದ್ಯಾಲಯ 2 ರ ವಿದ್ಯಾರ್ಥಿಗಳು ಮತ್ತು ಫಾತೀಮಾ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತೆಯ ಕುರಿತು ಕಿರು ನಾಟಕ ಪ್ರದರ್ಶಿಸಿದರು. ಕೆ.ಎಲ್.ಇ. ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳನ್ನು ಪ್ರಸ್ತುತಪಡಿಸಿದರು.

    ಸ್ವಚ್ಛತಾ ಪಾಕ್ಷಿಕದ ಅಂಗವಾಗಿ ಸ್ವಚ್ಛತೆಯ ವಿಷಯದ ಕುರಿತು ಆಯೋಜಿಸಿದ್ದ ಡ್ರಾಯಿಂಗ್ ಮತ್ತು ಪೇಂಟಿಂಗ್ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಎಸ್​ಎಸ್​ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆಯ ಬ್ಯಾಗ್​ಗಳನ್ನು ವಿತರಿಸಿ, ಏಕ ಬಳಕೆಯ ಪ್ಲಾಸ್ಟಿಕ್ ಬಳಸದಂತೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts