22.5 C
Bengaluru
Sunday, January 19, 2020

ನೆರೆ ಸಂತ್ರಸ್ತರಿಗೆ ನೇಕಾರರ ನೆರವು

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಕುಶಾಲನಗರ: ಕೊಡಗಿನ ಪ್ರಾಕೃತಿಕ ವಿಕೋಪದ ನಿರಾಶ್ರಿತರ ನೋವಿಗೆ ರಾಜ್ಯವೇ ಸ್ಪಂದಿಸಿದೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ನೆರವಿನ ಹಸ್ತ ಚಾಚುತ್ತಿದ್ದು, ಈ ಪೈಕಿ ಬಾಗಲಕೋಟೆಯ ನೇಕಾರರು ವಿಶೇಷವಾಗಿ ನಿಲ್ಲುತ್ತಾರೆ…

ನೇಯ್ಗೆಗೆ ನೂಲಿಲ್ಲದೆ, ಮಾಡಿದ ಕೆಲಸಕ್ಕೆ ಕೂಲಿ ಸಿಗದೆ, ಮಾಡಿದ ಸಾಲ ತೀರಿಸಲಾಗದೆ, ಸಾಲಮನ್ನಾಕ್ಕಾಗಿ ಸರ್ಕಾರದ ಕಡೆಗೆ ದೃಷ್ಟಿ ನೆಟ್ಟು ಹೆಚ್ಚು ಕಡಿಮೆ ತಾವೇ ಸಂತ್ರಸ್ತರ ರೀತಿ ಆಗಿದ್ದರೂ, ಕೊಡಗಿನ ಸಂಕಷ್ಟಕ್ಕೆ ಮಿಡಿದಿದ್ದಾರೆ.

ಬಾಗಲಕೋಟೆ ಜಿಲ್ಲೆ ಮಹಲಿಂಗಪುರ, ರಬಕವಿ, ಬನಹಟ್ಟಿ, ತೇರದಾಳ ಭಾಗದಲ್ಲಿನ ಬಡ ನೇಕಾರರು ತಮ್ಮ ಬದುಕು ನಡೆಸಲು ನೇಯ್ದ 1,500ಕ್ಕೂ ಹೆಚ್ಚು ಸೀರೆಗಳನ್ನು ರಾಜ್ಯ ನೇಕಾರ ಸೇವಾ ಸಂಘದ ಮೂಲಕ ಕೊಡಗಿಗೆ ಕಳುಹಿಸಿ ನೇರವಾಗಿ ಸಂತ್ರಸ್ತರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ.

ಸಂಘದ ಸದಸ್ಯರು ನೇಕಾರರ ಮನೆ ಮನೆಗೆ ತೆರಳಿ ಬೆಡ್​ಶೀಟ್, ಜಾಕೆಟ್, ಪ್ಯಾಂಟ್, ಷರ್ಟ್, ಟವೆಲ್, ಕರವಸ್ತ್ರ, ಒಳ ಉಡುಪು, ಮಕ್ಕಳ ಸಿದ್ಧ ಉಡುಪು ಸೇರಿ ಸಂತ್ರಸ್ತರಿಗೆ ತೀರಾ ಅಗತ್ಯ ಇರುವ ಬಟ್ಟೆಗಳನ್ನೂ ನೇರವಾಗಿ ತಲುಪಿಸಿದ್ದಾರೆ.

ಮೊದಲು ಬಾಗಲಕೋಟೆ ಜಿಲ್ಲಾಧಿಕಾರಿ ಅವರನ್ನು ಸಂರ್ಪಸಿ ತಾವು ಸಂಗ್ರಹಿಸಿದ ಬಟ್ಟೆಗಳನ್ನು ಕೊಡಗಿಗೆ ಕಳುಹಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಆದರೆ, ತಾವು ಯಾವುದೇ ದಾನ ಸ್ವೀಕರಿಸುವುದಿಲ್ಲ ಎಂದು ಅಲ್ಲಿನ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ನಂತರ ಕೊಡಗು ಜಿಲ್ಲಾಧಿಕಾರಿ ಅವರನ್ನು ಸಂರ್ಪಸಿ ತಾವೇ ಬಾಡಿಗೆ ವಾಹನ ಮಾಡಿಕೊಂಡು ಬಂದು ಕುಶಾಲನಗರದಲ್ಲಿರುವ ಆಶ್ರಯ ಕೇಂದ್ರ ಸೇರಿ ಜಿಲ್ಲೆಯ ವಿವಿಧೆಡೆ ಇರುವ ನೆರೆ ಪರಿಹಾರ ಕೇಂದ್ರದಲ್ಲಿ ಇರುವ ಸಂತ್ರಸ್ತರಿಗೆ ನೇರವಾಗಿ ತಲುಪಿಸಿದ್ದಾರೆ.

ಸಂಘದ ರಾಜ್ಯಾಧ್ಯಕ್ಷ ಶಿವಲಿಂಗನ್ ಟಿರಕಿ, ಪದಾಧಿಕಾರಿಗಳಾದ ರಾಜೇಂದ್ರ, ನಂದು ಲಾತೂರ, ಸಂಗಮೇಶ ಮರೆಗುದ್ದಿ, ನಂದು ಗಾಯಕವಾಡ, ಬಸವರಾಜ ಮನಮಿ, ಈಶ್ವರ ಕಾಡದೇವರ, ರಾಘು ಗರಗಟ್ಟಿ, ಹೊನ್ನಪ್ಪ ಬಿರಡಿ, ಶಿವು ಗುಂಡಿ ಸಂತ್ರಸ್ತರ ನೆರವಿಗೆ ಸ್ಪಂದಿಸಿದ ಸಾರ್ಥಕತೆಯೊಂದಿಗೆ ಬಾಗಲಕೋಟೆಗೆ ಮರಳಿದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...