More

    ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ

    ವಿಜಯವಾಣಿ ಸುದ್ದಿಜಾಲ ನೆಲಮಂಗಲ
    ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತವಾಗದೇ ಸಾಂಸ್ಕೃತಿಕ ಹಾಗೂ ರಂಗ ಶಿಕ್ಷಣದಲ್ಲಿ ವಿನಿಯೋಗಿಸಿದಾಗ ಮಾನಸಿಕ ಒತ್ತಡಗಳಿಂದ ದೂರವಾಗಬಹುದು ಎಂದು ರಂಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಿದ್ದರಾಜು ಹೇಳಿದರು.
    ನಗರದ ಮುರಳಿ ಪದವಿ ಪೂರ್ವ ಕಾಲೇಜಿನಲ್ಲಿ ‘ರಂಗ ಶಿಕ್ಷಣ ಕೇಂದ್ರ ರಂಗಭೂಮಿ’ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಕಲಾತ್ಮಕ ಪ್ರವೃತ್ತಿಗಳಲ್ಲಿ ತೊಡಗಿಸಿಕೊಂಡಾಗ, ಭವಿಷ್ಯದ ದಿನಗಳಲ್ಲಿ ಅವರ ಶ್ರೇಯೋಭಿವೃದ್ಧಿಗೆ ನೆರವಾಗುತ್ತದೆ. ಗ್ರಾಮೀಣ ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಅವರಲ್ಲಿ ರಂಗಪ್ರಜ್ಞೆಯನ್ನು ಮೂಡಿಸುವ ಉದ್ದೇಶ ಹೊಂದಿದೆ ಎಂದರು.
    ಶ್ರೀ ಮುರಳಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ. ಮುರಳಿಧರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯು ಹೊರಜಗತ್ತಿಗೆ ಪರಿಚಯವಾಗಲು ಅವಕಾಶ ಸಿಗುವುದು ಪ್ರಮುಖವಾದರೆ,ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ಅತ್ಯಗತ್ಯ. ರಂಗ ಶಿಕ್ಷಣ ಸಂಸ್ಥೆಗಳು ಆಸಕ್ತ ಕಲಾವಿದರು ಉತ್ತಮ ಕಲಾವಿದರಾಗಿ ಹೊರ ಹೊಮ್ಮಲು ಸಹಕಾರಿಯಾಗಿದೆ ಎಂದರು.
    ಕಾಲೇಜಿನ ಪ್ರಾಂಶುಪಾಲ ರಾಮಯ್ಯ, ಶ್ರೀನಿವಾಸಪುರ ಗ್ರಾಪಂ ಅಧ್ಯಕ್ಷ ಹನುಮಂತರಾಜು, ಶ್ರೀನಿವಾಸ ಸ್ಮಾರಕ ಪ್ರೌಢಶಾಲೆಯ ಮುಖ್ಯಶಿಕ್ಷಕ ಸುರೇಶ್, ಶಿಕ್ಷಕರಾದ ಮಾರುತಿ, ನರಹರಿ ರಾಜ್ಕುಮಾರ್, ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts