More

    ಪಿ.ವಿ ಸುಮಿತ ಅವರಿಗೆ ಪಿ.ಎಚ್‌ಡಿ


    ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಎಂ.ಬಿ.ಎ. ವಿಭಾಗದ ಸಹ ಪ್ರಾಧ್ಯಾಪಕಿ ಪಿ.ವಿ. ಸುಮಿತ ಅವರು ಮಂಡಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಹಿಳಾ ಸಬಲೀಕರಣ ಮತ್ತು ಸಂಪತ್ತು ಸೃಷ್ಟಿಯಲ್ಲಿ ಸ್ವಸಹಾಯ ಗುಂಪುಗಳ ಪಾತ್ರದ ಅಧ್ಯಯನ ಎಂಬ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.

    ಇವರು ಶಿವಮೊಗ್ಗದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ. ವಿಭಾಗದ ಎಸೋಸಿಯೇಟ್ ಪ್ರೊಫೆಸರ್ ಡಾ. ಸಂತೋಷ ಅವರ ಮಾರ್ಗದರ್ಶನದಲ್ಲಿ ರಚಿಸಿದ ಪ್ರಬಂಧಕ್ಕೆ ಪಿ.ಎಚ್‌ಡಿ. ಪದವಿ ದೊರೆತಿದೆ. ಸುಮಿತಾರವರು ಮಂಗಳೂರಿನ ಕೊಡಿಯಾಲ್‌ಬೈಲ್ ಪಿ. ಎಸ್. ವಿಶ್ವನಾಥ್ ಆಚಾರ್ ಮತ್ತು ಹೇಮಾ ವಿ. ಆಚಾರ್ ದಂಪತಿ ಪುತ್ರಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts