ಮೈಸೂರು: ರಾಜ್ಯಾದ್ಯಂತ ಬುಧವಾರದಿಂದ ಆರಂಭವಾಗಿರುವ ದ್ವಿತೀಯ ಪಿಯು ಪರೀಕ್ಷೆ ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನಡೆಯಿತು.
ಮೊದಲ ದಿನ ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್ ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದಿದ್ದು, ಜಿಲ್ಲಾದ್ಯಂತ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗಿದೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡಿಲ್ಲ. ಮೊದಲ ದಿನ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ. ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳ ಪೈಕಿ ಮೈಸೂರು ನಗರದಲ್ಲೇ 26 ಕೇಂದ್ರಗಳಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಜಿ.ಆರ್.ಗೀತಾ ‘ವಿಜಯವಾಣಿ’ಗೆ ತಿಳಿಸಿದ್ದಾರೆ.