More

    ನೋಟ್‌ಬ್ಯಾನ್, ಜಿಎಸ್‌ಟಿ ಜಾರಿಗೆ ಖಂಡನೆ

    ತಿ.ನರಸೀಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಸಂಘಟನೆಯ ನೇತೃತ್ವದಲ್ಲಿ ಬುಧವಾರ ಮಿನಿ ವಿಧಾನಸೌಧದ ಮುಂದೆ ನೂರಾರು ಜನ ಕಾರ್ಮಿಕರು ಪ್ರತಿಭಟನೆ ನಡೆಸಿದರು.

    ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಡಿವೈಎಫ್‌ಐ ಅಧ್ಯಕ್ಷ ಸಿ.ಪುಟ್ಟಮಲ್ಲಯ್ಯರವರ ನೇತೃತ್ವದಲ್ಲಿ ಜಮಾವಣೆಗೊಂಡ ಬಿಸಿಯೂಟ, ಗ್ರಾಮ ಪಂಚಾಯಿತಿಯ ನೂರಾರು ನೌಕರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಸಿ.ಪುಟ್ಟಮಲ್ಲಯ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಬ್ಯಾರಲ್ ಗೆ ಶೇ26.86ರಷ್ಟು ಕಡಿಮೆಯಾಗಿದ್ದರೂ ದೇಶದಲ್ಲಿ ಲೀಟರ್ ಗೆ 80 ರೂ.ಕೊಡಬೇಕಾದ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ರೂಪಿಸಿದ ನೋಟ್ ಬ್ಯಾನ್, ಜಿಎಸ್‌ಟಿ ಜಾರಿಯಿಂದಾಗಿ ಜನಸಾಮಾನ್ಯರು ಉಪಯೋಗಿಸುವ ಆಹಾರ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ ಎಂದು ಆರೋಪಿಸಿದರು.

    ವಿವಿಧ ಬೇಡಿಕೆಗಳಿರುವ ಒತ್ತಾಯದ ಮನವಿ ಪತ್ರವನ್ನು ತಹಸೀಲ್ದಾರ್ ಡಿ.ನಾಗೇಶ್ ಅವರಿಗೆ ಸಲ್ಲಿಸಿದರು. ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಎಂ.ಎಸ್.ಶಂಕರದೇವಮ್ಮ, ಗ್ರಾ.ಪಂ.ನೌಕರರ ಸಂಘದ ಅಧ್ಯಕ್ಷ ಮಾದೇಶ್, ರೈತ ಸಂಘದ ಅಧ್ಯಕ್ಷ ಕರೋಹಟ್ಟಿ ಕುಮಾರಸ್ವಾಮಿ,ರಾಜೇಶ್ವರಿ, ಕೆ.ನೀಲಾವತಿ, ಕಲಾವತಿ, ಮಹದೇವಮ್ಮ, ಎಚ್.ಪಿ.ಪ್ರಕಾಶ್ ಸೇರಿದಂತೆ ವಿವಿಧ ಸಂಘಟನೆಯ ಕಾರ್ಯಕರ್ತರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts