

ಮುಂಬೈ: ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಿರೀಕ್ಷೆಯಂತೆ ಟಿ20 ಮಾದರಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಏಕದಿನ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ವಹಿಸಲಾಗಿದೆ.
ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಆಡದೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಈ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ರೋಹಿತ್ ಶರ್ಮ ತಂಡವನ್ನು ಮುನ್ನಡೆಸಲಿದ್ದಾರೆ. ಈ ಮೊದಲು ಕೆ.ಎಲ್. ರಾಹುಲ್ಗೆ ಏಕದಿನದ ನಾಯಕತ್ವ ನೀಡಲಾಗುತ್ತದೆ ಎಂದು ವರದಿಯಾಗಿತ್ತು.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್,ಅರ್ಷದೀಪ್ ಸಿಂಗ್, ಖಲೀಲ್ ಅಹಮದ್, ಮೊಹಮ್ಮದ್ ಸಿರಾಜ್
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.