ಐರ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ರೋಚಕ ಜಯ: ವಿಶ್ವಕಪ್‌ನಲ್ಲಿ ಭಾರತಕ್ಕೆ ಗೆಲುವಿನ ಶುಭಾರಂಭ

1 Min Read
imn

ನ್ಯೂಯಾರ್ಕ್: ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಡಿ ಟಿ-20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಆಲ್​ರೌಂಡರ್ ಪ್ರದರ್ಶನದ ಫಲವಾಗಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ 8 ವಿಕೆಟ್​ಗಳ ಗೆಲುವು ಕಂಡಿದೆ.

ಇದನ್ನೂ ಓದಿ: ಮಧ್ಯಂತರ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಭೇಟಿಯಾದ ಪತ್ನಿ ಸುನಿತಾ!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡವನ್ನು ಇನ್ನಿಲ್ಲದಂತೆ ಕಾಡಿದ ಟೀಮ್ ಇಂಡಿಯಾ ಬೌಲರ್​ಗಳು ಎದುರಾಳಿ ತಂಡವನ್ನು 97 ರನ್​​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

98 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (52 ರನ್, 37 ಎಸೆತ, 4 ಬೌಂಡರಿ, 3 ಸಿಕ್ಸರ್), ರಿಷಭ್ ಪಂತ್ (36 ರನ್, 26 ಎಸೆತ, 3 ಬೌಂಡರಿ, 2 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಫಲವಾಗಿ ಗುರಿಯನ್ನು 12.2 ಓವರ್ಗಳಲ್ಲಿ ತಲುಪುವ ಮೂಲಕ ಗೆಲುವಿನ ನಗೆ ಬೀರಿತ್ತು.

ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ಭಾರತ ಜೂನ್ 09ರಂದು ಪಾಕಿಸ್ತಾನದ ವಿರುದ್ಧ ತನ್ನ ಎರಡನೇ ಪಂದ್ಯ ಆಡಲಿದೆ.

ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ ಸಿದ್ದರಾಮಯ್ಯ

See also  ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ, ಬಳಕೆ ನಿಷೇಧ
Share This Article