ಟಿ-20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಭಾರತ-ಪಾಕ್​ ಪಂದ್ಯಕ್ಕೆ ಡೇಟ್​ ಫಿಕ್ಸ್​

T20 WorldCup
Published on

ನವದೆಹಲಿ: ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ ವೇಳಾಪಟ್ಟಿಯನ್ನು ಅಂತರಾಷ್ಟ್ರೀಯ ಕ್ರಿಕೆಟ್​ ಸಮಿತಿ (ICC) ಶುಕ್ರವಾರ ಬಿಡುಗಡೆ ಮಾಡಿದೆ. ಜೂನ್​ 1ರಂದು ಮಿನಿ ವಿಶ್ವಕಪ್ ಆರಂಭವಾಗಲಿದ್ದು, ಜೂನ್​ 29ರಂದು ಮುಕ್ತಾಯಗೊಳ್ಳಲಿದೆ.

ಉದ್ಘಾಟನಾ ಪಂದ್ಯ ಆತಿಥೇಯ ಯುಎಸ್​ಎ ಹಾಗೂ ಕೆನಡಾ ನಡುವೆ ನಡೆದರೆ, ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಜೂನ್ 09 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಭಾರತವನ್ನು ಹೊರತುಪಡಿಸಿ ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಆತಿಥೇಯ ಯುಎಸ್​ಎ ಕೂಡ ಈ ಗುಂಪಿನಲ್ಲಿ ಸ್ಥಾನ ಪಡೆದಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 05 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ಜೂನ್​ 09ರಂದು ನ್ಯೂಯಾರ್ಕ್​ನಲ್ಲಿ ನಡೆಯಲಿದೆ.

ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಯುಎಸ್​ಎನಲ್ಲೇ ಆಡಲಿದ್ದು, ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಯುಎಸ್‌ಎನಲ್ಲಿ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27 ರಂದು ನಡೆಯಲಿವೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net