ಕ್ರೀಡೆಯಿಂದ ಮಾಸಿಕ ಆರೋಗ್ಯವೂ ಪ್ರಾಪ್ತಿ : ನಗರ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ಅನಿಸಿಕೆ

New Project (3)
Published on

ಬೆಳ್ತಂಗಡಿ: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಪ್ರಾಪ್ತಿಯಾಗುತ್ತದೆ. ಶಾಲಾ ದಿನಗಳಲ್ಲಿ ದೊರೆತ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ಕೆ ಹೇಳಿದರು.

ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಪದವಿ ಪೂರ್ವ ಕಾಲೇಜುಗಳ ಟೇಬಲ್ ಟೆನಿಸ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ತಾಲೂಕು ಕ್ರೀಡಾ ಸಂಯೋಜಕ ಸಂದೀಪ್ ಕುಮಾರ್ ಶೆಟ್ಟಿ ಶುಭಹಾರೈಸಿದರು. ಪ್ರಾಂಶುಪಾಲ ಸುಕೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂ ವಸತಿ ಕಾಲೇಜು ಉಪಪ್ರಾಂಶುಪಾಲ ಮನೀಶ್, ಕ್ರೀಡಾ ನಿರ್ದೇಶಕ ಲಕ್ಷ್ಮಣ್ ಗೌಡ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಕ್ರೀಡಾ ನಿರ್ದೇಶಕ ರವಿರಾಮ್ ಶೆಟ್ಟಿ, ಸಂಯೋಜಕಿ ಅನನ್ಯಾ ಉಪಸ್ಥಿತರಿದ್ದರು. ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಶುಭಲಕ್ಷ್ಮೀ ವಂದಿಸಿದರು. ರಾಕೇಶ್ ಕುಮಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net