

ಚಿತ್ರದುರ್ಗ: ಅಹಮದಾಬಾದ್ನಿಂದ ಆಗಮಿಸಿದ್ದ 15 ಮಂದಿ ತಬ್ಲಿಘಿ ಜಮಾತ್ ಸದಸ್ಯರಲ್ಲಿ ಮೂವರಿಗೆ ಕರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಅವರನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಶಾಸಕ ತಿಪ್ಪಾರೆಡ್ಡಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಶಾಸಕ ತಿಪ್ಪಾರೆಡ್ಡಿ ಅವರ ಮನೆ ಸಮೀಪ ಇರುವ ಹಾಸ್ಟೆಲ್ನಲ್ಲಿ 15 ಮಂದಿ ತಬ್ಲಿಘಿ ಜಮಾತ್ ಸದಸ್ಯರನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇವರಲ್ಲಿ ಮೂವರಿಗೆ ಸೋಂಕು ಹರಡಿದೆ ಎಂಬ ವಿಷಯ ಹರಿದಾಡುತ್ತಿದೆ. ಹೀಗಾಗಿ ಹಾಸ್ಟೆಲ್ನಲ್ಲಿ ಇರುವ ಎಲ್ಲರನ್ನೂ ಬೇರೆ ಕಡೆಗೆ ವರ್ಗಾಯಿಸಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಹಾಸ್ಟೆಲ್ನಲ್ಲಿ ಇರುವ 15 ಮಂದಿಯನ್ನು ಬೇರೆ ಕಡೆ ಸ್ಥಳಾಂತರಿಸಿದರೆ ಅದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ.
ಮೂವರಿಗೆ ಕರೊನಾ ಸೋಂಕು ತಗುಲಿರುವ ಬಗ್ಗೆ ಜಿಲ್ಲಾಡಳಿತ ಅಧಿಕೃತ ಮಾಹಿತಿಯನ್ನು ನೀಡಿಲ್ಲ.