

ಲಖನೌ: ಉತ್ತರ ಪ್ರದೇಶದ ಘಾಜಿಯಾಬಾದ್ ಆಸ್ಪತ್ರೆಯಲ್ಲಿ ನಿಗಾದಲ್ಲಿರುವ ತಬ್ಲಿಘಿ ಜಮಾತ್ನ ಕಾರ್ಯಕರ್ತರು ಅಶ್ಲೀಲ ಸಂಕೇತಗಳಲ್ಲದೆ, ಬೆತ್ತಲೆಯಾಗಿ ಆಸ್ಪತ್ರೆಯೊಳಗೆ ಅಡ್ಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸ್ಥಳೀಯ ಪೊಲೀಸರಿಗೆ ಘಾಜಿಯಾಬಾದ್ ಮುಖ್ಯ ವೈದ್ಯಕೀಯ ಅಧಿಕಾರಿ ಪತ್ರವೊಂದನ್ನು ಬರೆದಿದ್ದಾರೆ. ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರನ್ನು ಕರೊನಾ ಸೋಂಕು ತಗುಲಿರಬಹುದೆಂಬ ಶಂಕೆಯಿಂದ ಎಂಎಂಜಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ಗಳಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಆದರೆ, ಅವರು ಪ್ಯಾಂಟ್ ಇಲ್ಲದೆ, ಬೆತ್ತಲೆಯಾಗಿ ಅಶ್ಲೀಲ ಹಾಡುಗಳನ್ನು ಕೇಳುತ್ತಾ ಮನಸೋ ಇಚ್ಛೆ ಓಡಾಡುತ್ತಿದ್ದಾರೆ. ಅವರೆಲ್ಲ ಆಸ್ಪತ್ರೆಯ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆಸ್ಪತ್ರೆಯ ನರ್ಸ್ ಸಿಬ್ಬಂದಿ ಇಂತಹ ರೋಗಿಗಳ ವಿರುದ್ಧ ದೂರು ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಹೌಸ್ಕೀಪಿಂಗ್ ಸಿಬ್ಬಂದಿ ಬಳಿಯೂ ಸಿಗರೇಟ್ ಕೇಳಿದ್ದಾರೆ. ನರ್ಸ್ಗಳಿಗೆ ಅಶ್ಲೀಲ ಸಂಕೇತವನ್ನು ತೋರಿಸಿದ್ದಾರೆ. ಇಂತಹ ಸಂದಿಗ್ಧ ಸಮಯದಲ್ಲಿ ಇಂತಹ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟವಾಗಿದೆ ಎಂದು ಹಿರಿಯ ವೈದ್ಯಾಧಿಕಾರಿಗಳು ಹೇಳಿದ್ದಾರೆ. (ಏಜೆನ್ಸೀಸ್)