ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವಿರುದ್ಧ ಟಬು ದೂರು

tabu
Published on

ಬೆಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಗೆ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ದೂರು ಸಲ್ಲಿಸಿದ್ದಾರೆ.

ಭಾನುವಾರ ಸಂಜಯನಗರ ಠಾಣೆ ಇನ್‌ಸ್ಪೆಕ್ಟರ್‌ಗೆ ದೂರು ಸಲ್ಲಿಸಿರುವ ಟಬು ರಾವ್, ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಕುಟುಂಬದ ಹೆಸರನ್ನು ಹಾಳು ಮಾಡುವ ದುರುದ್ದೇಶದಿಂದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದರಿಂದ ನಮ್ಮ ಭಾವನೆಗಳಿಗೆ ನೋವುಂಟು ಮಾಡಿ ಸಾರ್ವಜನಿಕವಾಗಿ ಅವಹೇಳನ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ರಾಮೇಶ್ವರ ಸ್ಫೋಟ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ಅಧಿಕಾರಿಗಳ ವಿಚಾರಣೆ ನಡೆಸಿದ್ದರು. ಈ ಕುರಿತು ದಿನೇಶ್ ಗುಂಡೂರಾವ್, ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಯತ್ನಾಳ್, ‘ದಿನೇಶ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂದು ಹೇಳಿಕೆ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net