ತಡಸ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು. ಕ್ರೀಡಾಕ್ಷೇತ್ರ ಕೂಡ ವಿಶಾಲವಾಗಿದೆ ಎಂದು ಗ್ರಾಮದ ಶ್ರೀ ಸದ್ಗುರು ಸಿದ್ಧಾರೂಢ ವಿದ್ಯಾಪೀಠದ ಅಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮೀಜಿ ಹೇಳಿದರು.
ಹಾವೇರಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತ ವಿಭಾಗದಲ್ಲಿ ಪ್ರಥಮ ಮತ್ತು ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ದುಂಡಿ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊರೋಡಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಸಂಸ್ಥೆ ಗೌರವಾಧ್ಯಕ್ಷ ಅಜ್ಜಪ್ಪ ವಾರದ, ಉಪಾಧ್ಯಕ್ಷ ವಿಠ್ಠಲ ದುಂಡಪ್ಪನವರ, ಸದಸ್ಯರಾದ ಈರಣ್ಣ ಗೂಣಪ್ಪನವರ, ಬಸವರಾಜ ಶಿರಗುಪ್ಪಿ, ಶಂಕ್ರಣ್ಣ ಮಹಾಜನಶೆಟ್ಟರ, ಸಂಸ್ಥೆಯ ಸದಸ್ಯರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.