More
    Home Tags Child

    Tag: Child

    ಬಾಲ್ಯ ವಿವಾಹ ತಡೆಗೆ ಬೇಕು ಸಮಾಜದ ಸಹಕಾರದಾವಣಗೆರೆ : ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ಹಲವು ಕಾಯ್ದೆಗಳನ್ನು ಜಾರಿಗೆ ತಂದಿದ್ದು, ಇಲಾಖೆಗಳ ಜತೆಯಲ್ಲಿ ಸಮಾಜವೂ ಕೈ ಜೋಡಿಸಿದಾಗ ಈ ಪಿಡುಗು ನಿಯಂತ್ರಿಸಲು ಸಾಧ್ಯ ಎಂದು ಎರಡನೇ ಹೆಚ್ಚುವರಿ ಜಿಲ್ಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್. ಪ್ರವೀಣ ಕುಮಾರ ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಸೋಮವಾರ ನಡೆದ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತ ಅರಿವು ಕಾರ್ಕ್ರಮದಲ್ಲಿ ಮಾತನಾಡಿದರು. ಬಾಲ್ಯವು ಜೀವನದ ಹಲವು ಘಟ್ಟಗಳಲ್ಲಿ ಅಮೂಲ್ಯವಾದುದು. ಆ ಹಂತದಲ್ಲಿ ಆಟ, ಪಾಠ ಮತ್ತು ಮನರಂಜನೆ ಜತೆ ಜತೆಯಾಗಿ ನಡೆಯಬೇಕು. ಮಕ್ಕಳು ಬಾಲ್ಯವನ್ನು ಸಂತೋಷದಿಂದ ಅನುಭವಿಸುವಂತಾಗಲು ಹಲವಾರು ಕಾರ್ಯಕ್ರಮ, ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಮುಂತಾದ ಕಾಯ್ದೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಇಷ್ಟೆಲ್ಲ ಇದ್ದರೂ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಈಗಲೂ ಜೀವಂತವಾಗಿವೆ. ವಿದ್ಯಾರ್ಥಿನಿಯರು ಇಂತಹ ಘಟನೆಗಳು ತಮ್ಮ ಗಮನಕ್ಕೆ ಬಂದಲ್ಲಿ ಮಾಹಿತಿಯನ್ನು ಪೊಲೀಸರಿಗೆ ಅಥವಾ ಶಾಲಾ ಮುಖ್ಯೋಪಾಧ್ಯಾಯರಿಗೆ ನೀಡಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಮಾತನಾಡಿ, ಹದಿಹರೆಯದ ವಯಸ್ಸಿನಲ್ಲಿ ದೈಹಿಕ ಆಕರ್ಷಣೆಗೆ ಒಳಗಾಗಿ ಗಂಡು ಮತ್ತು ಹೆಣ್ಣು ಮಕ್ಕಳು ಪ್ರೀತಿ, ಪ್ರೇಮದ ಬಲೆಯಲ್ಲಿ ಬೀಳುವುದು ಸಹಜ. ಆದರೆ ಬಾಹ್ಯ ರೂಪದ ಆಕರ್ಷಣೆಯನ್ನು ಮೀರಿ ತಾವು ಸಾಧಿಸಬೇಕಾಗಿರುವ ಗುರಿಯತ್ತ ಲಕ್ಷ್ಯವಿಟ್ಟು ಮಕ್ಕಳು ಹೆಜ್ಜೆ ಹಾಕಬೇಕು ಎಂದು ಸಲಹೆ ನೀಡಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಸ್.ಜಿ. ಸಲಗರೆ, ಬಾಲ್ಯ ವಿವಾಹ ನಿಷೇಧ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಎವಿಕೆ ಕಾಲೇಜಿನ ಪ್ರಾಚಾರ್ಯೆ ಕಮಲಾ ಸೊಪ್ಪಿನ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ, ಹಿರಿಯ ಕಾನೂನು ಅಧಿಕಾರಿ ಕೆ.ಜಿ. ಕಲ್ಪನಾ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಾಮಾನಾಯ್ಕ, ಡಿಡಿಪಿಐ ಕೊಟ್ರೇಶ್ ಇದ್ದರು. ಚಿತ್ರ: ಡಿವಿಜಿ ಎವಿಕೆ ಕಾಲೇಜು 16 ದಾವಣಗೆರೆಯಲ್ಲಿ ಸೋಮವಾರ ಬಾಲ್ಯ ವಿವಾಹ ನಿಷೇಧ ಕುರಿತ ಅರಿವು ಕಾರ್ಕ್ರಮವನ್ನು ಎರಡನೇ ಹೆಚ್ಚುವರಿ ಜಿಲ್ಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್. ಪ್ರವೀಣ ಕುಮಾರ ಉದ್ಘಾಟಿಸಿದರು. ಎಸ್.ಜಿ. ಸಲಗರೆ, ಮಹಾವೀರ ಮ ಕರೆಣ್ಣವರ, ಕೆ.ಜಿ. ಕಲ್ಪನಾ, ರಾಮಾನಾಯ್ಕ, ವಾಸಂತಿ ಉಪ್ಪಾರ್, ಕೊಟ್ರೇಶ್, ಕಮಲಾ ಸೊಪ್ಪಿನ್ ಇದ್ದರು. …