More

    ಬೆಳೆ ನಷ್ಟ ಅನುಭವಿಸಿದ ರೈತರ ಆರ್ಥಿಕ ಸಂಕಷ್ಟಕ್ಕೆ ನೆರವಾಗಿ

    ಶೃಂಗೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಅಂಬುಜಾಗೆ ಮನವಿ ಸಲ್ಲಿಸಿದರು.

    ರೈತ ಸಂಘದ ತಾಲೂಕು ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್ ಮಾತನಾಡಿ, ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆ, ಕಾಫಿ, ಕಾಳುಮೆಣಸು ಮುಂತಾದ ಬೆಳೆಗಳಿಗೆ ಕೊಳೆ ರೋಗ, ಕೀಟಬಾಧೆ ತೀವ್ರವಾಗಿ ಹರಡುತ್ತಿದೆ. ಬೆಳೆಗೆ ಸರಿಯಾದ ಬೆಲೆ ಸಿಗದೆ ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅಕ್ರಮ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53 ಮತ್ತು 57ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ ಅರ್ಜಿಗಳನ್ನು ನೀಡಿ ಪಹಣಿ ದಾಖಲಿಸಿಕೊಡಬೇಕು. ನಮೂನೆ 53ರಲ್ಲಿ 146 ರೈತರಿಗೆ ಮಾತ್ರ ಸಾಗುವಳಿ ಚೀಟಿ ನೀಡಲಾಗಿದ್ದು, ಕೂಡಲೇ ಉಳಿದ ಕೃಷಿಕರಿಗೂ ಪಹಣಿ ನೀಡಬೇಕು ಎಂದು ಆಗ್ರಹಿಸಿದರು.

    ರೈತ ಸಂಘದ ತಾಲೂಕು ಮಾಜಿ ಅಧ್ಯಕ್ಷ ಬಂಡ್ಲಾಪುರ ಶ್ರೀಧರ್ ಮಾತನಾಡಿ, ಸೋಮವಾರ ರೈತರು, ಸಾರ್ವಜನಿಕರು ತಾಲೂಕು ಕಚೇರಿಗೆ ಹೆಚ್ಚಾಗಿ ಭೇಟಿ ನೀಡುತ್ತಾರೆ. ಆಗ ಕಂದಾಯ ಅಧಿಕಾರಿಗಳು ಕಚೇರಿಯಲ್ಲಿ ಹಾಜರಿದ್ದು ಕೃಷಿಕರ ಕೆಲಸ ಮಾಡಿಕೊಡಬೇಕು. ತಾಲೂಕಿನಲ್ಲಿ ವ್ಯಾಪಾರಿಗಳು ವಿವಿಧ ಕಂಪನಿಗಳ ಮೈಲುತುತ್ತವನ್ನು ವಿವಿಧ ದರದಲ್ಲಿ ಮಾರುತ್ತಿರುವುದರಿಂದ ಗೊಂದಲ ಉಂಟಾಗುತ್ತಿದೆ. ಉತ್ತಮ ಗುಣಮಟ್ಟದ ಮೈಲುತುತ್ತವನ್ನು ನ್ಯಾಯವಾದ ಬೆಲೆಯಲ್ಲಿ ದೊರಕಿಸಿಕೊಡಲು ಸಂಬಂಧಪಟ್ಟ ಇಲಾಖೆ ಕ್ರಮ ಕೈಕೊಳ್ಳಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts