More

    ಜನರನ್ನು ಅಲೆದಾಡಿಸಿದರೆ ಎತ್ತಂಗಡಿ ನಿಶ್ಚಿತ : ಅಧಿಕಾರಿಗಳಿಗೆ ಸಚಿವ ಎಂಟಿಬಿ ನಾಗರಾಜ್ ಎಚ್ಚರಿಕೆ

    ನಂದಗುಡಿ : ಸವಲತ್ತು ನೀಡಿದ್ದರೂ ಜನಸೇವೆ ಮಾಡದೆ ಜನರನ್ನು ಅಲೆಯುವಂತೆ ಮಾಡಿದರೆ ಎತ್ತಂಗಡಿ ಮಾಡಬೇಕಾಗುತ್ತದೆ. ಕಾನೂನು ಚೌಕಟ್ಟಿನಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಎಚ್ಚರಿಕೆ ನೀಡಿದರು.

    ಶಿವನಾಪುರ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹಲವು ಜನಪರ ಕಾರ್ಯಕ್ರಮ ರೂಪಿಸುತ್ತಿದೆ. ಈ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವುದು ಅಧಿಕಾರಿಗಳ ಕರ್ತವ್ಯ ಎಂದರು.

    ಹೊಸಕೋಟೆ ತಾಲೂಕಿನಲ್ಲಿ 280 ಗ್ರಾಮಗಳಿದ್ದು, 5 ಗ್ರಾಮಗಳನ್ನು ಈ ಹಿಂದೆ ಪೋಡಿಮುಕ್ತ ಗ್ರಾಮಗಳನ್ನಾಗಿ ಮಾಡಿದ್ದೆವು. ಅಲ್ಲದೆ ಹೋಬಳಿಮಟ್ಟದಲ್ಲಿ ಕಂದಾಯ ಅದಾಲತ್, ಪಿಂಚಣಿ ಅದಾಲತ್ ಸೇರಿ ಹಲವಾರು ಕಾರ್ಯಕ್ರಮ ರೂಪಿಸಿದ್ದೆವು. ಈಗ ಬಿಎಸ್‌ವೈ ಸರ್ಕಾರ ಪ್ರತಿ ತಿಂಗಳ ಮೂರನೇ ಶನಿವಾರ ಒಂದೊಂದು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಗ್ರಾಮದಲ್ಲಿ ಸರ್ಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸುವ ಕಾರ್ಯದೊಂದಿಗೆ ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದರು.

    ಮನೆ ಬಾಗಿಲಿಗೆ ಸರ್ಕಾರಿ ಸೇ ಒದಿಗಿಸುವ ಮಹಾತ್ವಾಕಾಂಕ್ಷಿಯ ಜಿಲ್ಲಾಧಿಕಾರಿಗಳ ನಡಿಗೆ, ಹಳ್ಳಿ ಕಡೆಗೆ ಎಂಬ ವಿನೂತನ ಕಾರ್ಯಕ್ರಮವನ್ನು ಬಿಜೆಪಿ ಸರ್ಕಾರ ರೂಪಿಸಿದ್ದು, ಅಧಿಕಾರಿಗಳು ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಅಧಿಕಾರಿಗಳು, ಇಲಾಖೆ ವ್ಯಾಪ್ತಿಯ ಮಾಹಿತಿಯನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಿಳಿಸಬೇಕು ಎಂದು ಗ್ರಾಪಂ ಅಧ್ಯಕ್ಷ ಕೆ.ಸಿ. ನಾರಾಯಣಪ್ಪ ಹೇಳಿದರು.

    ಈ ಹಿಂದೆ 3 ಭಾರಿ ಶಾಸಕರಾಗಿದ್ದ ಎಂಟಿಬಿ ಅವರು ಪ್ರತಿ ಗ್ರಾಮದಲ್ಲೂ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ನಡೆಸಿದ್ದಾರೆ, ಪ್ರಸ್ತುತ ಸಚಿವರಾಗಿದ್ದು, ತಾಲೂಕಿನ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಿದ್ದಾರೆ ಎಂದು ಜಿಪಂ ಸದಸ್ಯ ನಾಗರಾಜ್ ಹೇಳಿದರು. ಅಂಗವಿಕಲರಿಗೆ ವೀಲ್‌ಚೇರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯಲಕ್ಷ್ಮೀ ಬಾಂಡ್, ಜಾಬ್ ಕಾರ್ಡ್ ಸೇರಿ ವಿವಿಧ ಸೌಲಭ್ಯಗಳನ್ನು ಸ್ಥಳದಲ್ಲಿಯೇ ವಿತರಣೆ ಮಾಡಿಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts