ಬಂಟ್ವಾಳ: ಸ್ವಾತಂತ್ರ್ಯಗಳಿಸುವುದಕೋಸ್ಕರ ಹಲವಾರು ಕ್ರಾಂತಿಕಾರಿ ಹೋರಾಟಗಾರರ ಶ್ರಮದ ಹಿಂದೆ ಮಹಿಳಾ ಶಕ್ತಿಯ ಪ್ರೇರಣೆ ಅಡಗಿದೆ. ದೇಶದ ಸಂಸ್ಕೃತಿ ಮತ್ತು ಸಂಸ್ಕಾರ, ಆಧ್ಯಾತ್ಮಿಕತೆಯನ್ನು ಉಳಿಸಿಕೊಳ್ಳಲು ಸ್ತ್ರೀ ಶಕ್ತಿಯ ಪಾತ್ರ ಮಹತ್ತರವಾದುದು ಎಂದು ರಾಷ್ಟ್ರ ಸೇವಿಕಾ ಸಮಿತಿಯ ದಕ್ಷಿಣ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಕಾರ ಪರಿವೀಕ್ಷಣಾ ಪ್ರಮುಖ್ ಮೀನಾಕ್ಷಿ ಭಗಿನಿ ರಾಯಿ ಹೇಳಿದರು.
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ ಮಂಗಳೂರು, ಸಿಸಿಟೆಕ್ ಮಂಗಳೂರು, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಸಹಕಾರದಲ್ಲಿ ಸಿದ್ದಕಟ್ಟೆಯಲ್ಲಿ ಟೈಲರಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಲೊರೆಟ್ಟೋ ಹಿಲ್ಸ್ ರೋಟರಿ ಅಧ್ಯಕ್ಷ ಸುರೇಶ್ ಶೆಟ್ಟಿ ಮಾತನಾಡಿ, ಅರ್ಹ 4-5 ಜನರಿಗೆ ಟೈಲರಿಂಗ್ ಮಷಿನ್ ಖರೀದಿಸಲು ಸಹಕಾರ ನೀಡಲಾಗುವುದು ಎಂದು ಪ್ರಕಟಿಸಿದರು.
ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನ ಕುಮಾರ್ ಚೌಟ, ಸಿದ್ದಕಟ್ಟೆ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಭಟ್ ಅಜಕ್ಕಳ, ಸಂಗಬೆಟ್ಟು ಗ್ರಾಪಂ ಅಧ್ಯಕ್ಷೆ ರಾಜೀವಿ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಅಧ್ಯಕ್ಷ ಶಿವಯ್ಯ ಎಲ್, ಬಂಟ್ವಾಳ ತಾಲೂಕು ಟೈಲರ್ ಅಸೋಸಿಯೇಷನ್ ಅಧ್ಯಕ್ಷ ನಾಗೇಶ್ ಎಂ. ಶುಭ ಹಾರೈಸಿದರು.
ಸಂಗಬೆಟ್ಟು ಗ್ರಾಪಂ ಉಪಾಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಸತೀಶ್ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ, ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತುಗಾರ್ತಿ ಪ್ರೇಮಾ, ರೋಟರಿ ಕ್ಲಬ್ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಸೀತಾಳ, ರೋಟರಿ ಮಾಜಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್, ಸಂಗಬೆಟ್ಟು ಗ್ರಾಪಂ ಸದಸ್ಯರಾದ ದಾಮೋದರ ಪೂಜಾರಿ, ಶಕುಂತಲಾ, ಶಾಂತಾ, ವಿದ್ಯಾ, ಹೇಮಲತಾ, ಸಂಘದ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಅರುಣಾ ಎಸ್.ಶೆಟ್ಟಿ, ಮಾಧವ ಶೆಟ್ಟಿಗಾರ್, ಹರೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ನಿದೇಶಕ ಸಂದೇಶ್ ಶೆಟ್ಟಿ ಪೊಡುಂಬ ಸ್ವಾಗತಿಸಿದರು. ನಿರ್ದೇಶಕಿ ಮಂದಾರತಿ ಎಸ್.ಶೆಟ್ಟಿ ವಂದಿಸಿದರು. ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.