More

  ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹ

  ವಿಜಯಪುರ: ತಿಕೋಟಾ ತಾಲೂಕಿನ ತಾಜಪುರ (ಎಚ್) ಗ್ರಾಮದಲ್ಲಿ ಮದ್ಯ ಮಾರಾಟ ತಡೆಯುವಂತೆ ಒತ್ತಾಯಿಸಿ ಅಹಿಂದ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
  ಸಂಸ್ಥಾಪಕ ಅಧ್ಯಕ್ಷ ಮಲ್ಲಪ್ಪ ಬಿದರಿ ಮಾತನಾಡಿ, ತಾಜಪುರ ಗ್ರಾಮದಲ್ಲಿ ಹೆಚ್ಚು ಶ್ರಮಿಕ ಕುಟುಂಬಗಳಿವೆ. ಗ್ರಾಮದಲ್ಲಿ ರಾಜಾರೋಷವಾಗಿ ಮದ್ಯ ಮಾರಾಟದಿಂದ ಯುವಕರು ಹಾಗೂ ಶ್ರಮಿಕರು ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದರು.
  ಸುಧಾಕರ ಕನಮಡಿ ಮಾತನಾಡಿ, ಮದ್ಯ ಮಾರಾಟ ಕುರಿತು ಹಲವು ಬಾರಿ ಸಂಬಂಧಪಟ್ಟ ಪೊಲೀಸ್ ಹಾಗೂ ಅಬಕಾರಿ ಇಲಾಖೆಗೂ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ತಾವು ಗ್ರಾಮದ ಜನತೆ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಿಸಿ, ಮದ್ಯ ಮಾರಾಟಗಾರರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
  ಮಲ್ಲಿಕಾರ್ಜುನ ನಾಯ್ಕೋಡಿ, ದೇವಕಾಂತ ಬಿಜ್ಜರಗಿ, ವಿಠ್ಠಲ ನಾಟೀಕಾರ ಮತ್ತಿತರರು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts