ವಿದ್ಯಾಭ್ಯಾಸದತ್ತ ಹೆಚ್ಚಿನ ಗಮನಹರಿಸಿ

ಅರಸೀಕೆರೆ: ಪಿಯುಸಿ ಹಂತ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಘಟ್ಟವಾಗಿದ್ದು, ಈ ಅವಧಿಯಲ್ಲಿ ವಿದ್ಯಾಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ನಗರದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಲಿಂಗರಾಜು ಹೇಳಿದರು.

ಗಣಪತಿ ಪೂಜೆಯೊಂದಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಸ್ವಾಗತಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನ್ಯ ಚಟುವಟಿಕೆಯತ್ತ ಗಮನ ಹರಿಸದೆ ಶಿಕ್ಷಣದತ್ತ ಗಮನಹರಿಸಿದರೆ ಉತ್ತಮ ಭವಿಷ್ಯಕ್ಕೆ ದಾರಿಯಾಗಲಿದೆ ಎಂದರು.

Leave a Reply

Your email address will not be published. Required fields are marked *