ಸಿಂಧನೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷೃದಿಂದ ಬಾಣಂತಿ ಮೃತಪಟ್ಟಿರುವ ಕುರಿತು ತನಿಖೆ ನಡೆಸಲು ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ ನಗರದ ತಹಸಿಲ್ ಕಚೇರಿ ಮುಂಭಾಗ ಶುಕ್ರವಾರ ಅನಿರ್ದಿಷ್ಟಾವಧಿ ಧರಣಿ ನಡೆಸಿತು.
ಇದನ್ನೂ ಓದಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವೈದ್ಯ,ನರ್ಸ್
ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ನಡೆಸುವ ಮೂಲಕ ಕರ್ತವ್ಯಲೋಪ ಎಸಗುತ್ತಿದ್ದಾರೆ. ಅ.21ರಂದು ಆರ್.ಎಚ್.ಕ್ಯಾಂಪ್-3ರ ಮೌಸಂಬಿ ಮಹೇಶ್ವರ ಮಂಡಲ್ ಗರ್ಭಿಣಿ ಮಹಿಳೆ ಹೆರಿಗೆ ನಂತರ ಮೃತಪಟ್ಟಿರುವುದು ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.
ಸುರಕ್ಷತ ಮಾತೃತ್ವ ಆಶ್ವಾಸನೆ (ಸುಮನ್) ಯೋಜನೆ ಮಾತಿಗೆ ಮಾತ್ರ ಸಿಮೀತವಾಗಿದೆ. ಆಸ್ಪತ್ರೆಯಲ್ಲಿ ನಡೆಯುವ ಸಾವು-ನೋವುಗಳಿಗೆ ಕಾರಣ ತಿಳಿದಿದ್ದರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮಕೈಗೊಳ್ಳದಿರುವುದು ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಘಟಕದ ಕಾರ್ಯಾಧ್ಯಕ್ಷ ಉಮೇಶಗೌಡ, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, ಸೇನೆ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಂಚಾಲಕ ಹುಸೇನ್ ಬಾಷಾ ಇಂದಿರಾನಗರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ, ತಾಲೂಕು ಉಪಾಧ್ಯಕ್ಷ ಗದ್ದೆಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಹನುಮಂತ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪಾವನಿ ಪ್ರಮುಖರಾದ ಸದ್ದಾಂ, ಎಂ.ಡಿ.ನಬಿ, ಮಲ್ಲಿಕಾರ್ಜುನ, ಅಬ್ದುಲ್ ನಬಿ, ಮಹ್ಮದ್ ಚಿಟಗಿ ಇದ್ದರು.