More

    ಪೂರ್ವಾನುಮತಿ ಇಲ್ಲದೆ ಶೌಚಗೃಹ ತೆರವು

    ಹುಬ್ಬಳ್ಳಿ: ನಗರದ ಗಣೇಶಪೇಟ ಬಳಿ ಪಾಲಿಕೆ ಒಡೆತನದ ಜಾಗದಲ್ಲಿದ್ದ ಸಾರ್ವಜನಿಕ ಶೌಚಗೃಹವನ್ನು ಪೂರ್ವಾನುಮತಿ ಇಲ್ಲದೆ ತೆರವುಗೊಳಿಸಲಾಗಿದೆ. ಇಲ್ಲಿ ಶೌಚಗೃಹ ಮರು ನಿರ್ವಣಕ್ಕೂ ಮೊದಲೇ ಖಾಸಗಿಯವರೊಂದಿಗೆ ನಿರ್ವಹಣಾ ಒಪ್ಪಂದ ಮಾಡಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಶಾಸಕ ಪ್ರಸಾದ ಅಬ್ಬಯ್ಯ ಸೂಚಿಸಿದರು.

    ಅವರು, ತಮ್ಮ ಗೃಹ ಕಚೇರಿಯಲ್ಲಿ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

    ಪಾಲಿಕೆ ಅಧಿಕಾರಿಗಳು ಕಾಮಗಾರಿ ನಡೆಯುವ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿಲ್ಲ. ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕ್ಷೇತ್ರದೆಲ್ಲೆಡೆ ಓಡಾಡಿ ಕಾಮಗಾರಿ ಪರಿಶೀಲನೆ ಮಾಡಬೇಕು. ಪಾಲಿಕೆ ಒಡೆತನದ ಆಸ್ತಿಗಳನ್ನು ಇನ್ಯಾರೋ ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪಾಲಿಕೆಯ ಕಾನೂನು ಕೋಶದ ವೈಫಲ್ಯವೇ ಮೂಲ ಕಾರಣವಾಗಿದೆ ಎಂದು ಹೇಳಿದರು.

    ಮೇದಾರ ಓಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಸ್ಥಾಪಿಸಲು ಯಂತ್ರೋಪಕರಣ ಸೇರಿ ಒಟ್ಟು 1.30ಕೋಟಿ ರೂ.ಗಳ ಅವಶ್ಯವಿದೆ. ಈ ಬಗ್ಗೆ ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅತೀ ಅವಶ್ಯವಿರುವ ಡಯಾಲಿಸಿಸ್ ಸೆಂಟರ್ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ರ್ಚಚಿಸಿ ಅನುದಾನ ಮಂಜೂರು ಮಾಡಿಸಲಾಗುವುದು. ಸಿಬಿಟಿ ಬಳಿ ಇರುವ ತೊರವಿಗಲ್ಲಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ವಣವಾಗಿ ವರ್ಷಗಳೇ ಕಳೆದರೂ ಇದುವರೆಗೂ ಕಾರ್ಯಾರಂಭ ಮಾಡಿಲ್ಲ. ಅ.30ರೊಳಗೆ ಈ ಕಾರ್ಯಾರಂಭ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸಹಾಯಕ ಆಯುಕ್ತ ಗಿರೀಶ ತಳವಾರ, ಸ್ಮಾರ್ಟ್ ಸಿಟಿ ಅಧಿಕಾರಿ ಅಜೀಜ್ ದೇಸಾಯಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts