More

    ಎಸ್‌ಎಫ್‌ಐ ವಿರುದ್ಧ ಕ್ರಮ ಕೈಗೊಳ್ಳಿ: ಎಬಿವಿಪಿ ಮನವಿ

    ಶಿವಮೊಗ್ಗ: ಎಸ್‌ಎಫ್‌ಐ (ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ) ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ವಿವಿ ಕ್ಯಾಂಪಸ್‌ಗಳಲ್ಲಿ ದುಷ್ಕೃತ್ಯ ಎಸಗುತ್ತಿದ್ದಾರೆ. ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಡಿಸಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

    ಕೇರಳದ ಪೂಕೊಡೆ ಪಶು ವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿವಿಯ ಎರಡನೇ ವರ್ಷದ ವಿದ್ಯಾರ್ಥಿ ಸಿದ್ಧಾರ್ಥನ್ ಅವರ ಆತ್ಮಹತ್ಯೆ ಪ್ರಕರಣ ರಾಷ್ಟ್ರಾದ್ಯಂತ ಆಘಾತವನ್ನುಂಟು ಮಾಡಿದೆ. ಕಾಲೇಜು ಹಾಸ್ಟೆಲ್‌ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಅವರಿಗೆ ಎಸ್‌ಎಫ್‌ಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತೀವ್ರ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದರು ಎಂದು ದೂರಿದರು.
    ೆ.16ರ ರಾತ್ರಿ ಸಿದ್ಧಾರ್ಥನ್ ಅವರನ್ನು ಕ್ರೂರವಾಗಿ ಹಿಂಸಿಸಲಾಯಿತು. ಪುರುಷರ ಹಾಸ್ಟೆಲ್ ಬಳಿಯ ಬೆಟ್ಟದ ಮೇಲೆ ಕರೆಸಿಕೊಂಡು ಚಿತ್ರಹಿಂಸೆ ನೀಡಿದ್ದಾರೆ. ನಂತರ ವಿದ್ಯಾರ್ಥಿಗಳ ಮುಂದೆ ಹಲ್ಲೆ ನಡೆಸಲಾಗಿದೆ. ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ಘಟಕ ಎಸ್‌ಎ್ಐ ಕಾರ್ಯಕರ್ತರು ಆರೋಪಿಗಳಾಗಿರುವುದರಿಂದ ಅಲ್ಲಿನ ಪೊಲೀಸರಿಗೆ ಒತ್ತಡ ಹೆಚ್ಚಿದೆ. ಹೀಗಾಗಿ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
    ಅಲ್ಲಿ ಎಬಿವಿಪಿ ಹೋರಾಟ ನಡೆಸಿದ ಪರಿಣಾಮ ಎಸ್‌ಎ್ಐ ಅಧ್ಯಕ್ಷ, ಸದಸ್ಯರು ಸೇರಿ 20 ಮಂದಿಯನ್ನು ಬಂಧಿಸಲಾಗಿದೆ. ಕಮ್ಯುನಿಸ್ಟ್ ಸಿದ್ಧಾಂತವು ಪ್ರಜಾಪ್ರಭುತ್ವದ ಆದರ್ಶಗಳಿಗೆ ಬೆದರಿಕೆಯಾಗಿದೆ. ಕಾಲೇಜ್ ಕ್ಯಾಂಪಸ್‌ಗಳಲ್ಲಿ ಎಸ್‌ಎ್ಐ ದಾಳಿ ಮಾಡುತ್ತಿರುವುದು ಇದೇ ಮೊದಲಲ್ಲ. ಹಾಗಾಗಿ ಇಂತಹ ಹಿಂಸಾತ್ಮಕ ಸಂಘಟನೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು.
    ಎಬಿವಿಪಿ ರಾಜ್ಯ ಕಾರ್ಯದರ್ಶಿ ಎಚ್.ಕೆ.ಪ್ರವೀಣ್, ಪ್ರಮುಖರಾದ ಲೋಹಿತ್, ವರುಣ್, ಸಚಿನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts