More

    ಅವಹೇಳನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ

    ಚಿಕ್ಕಮಗಳೂರು: ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂದು ಧರಣಿ ನಡೆಸಿದ ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಬಿಜೆಪಿ ಮುಖಂಡರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ವಿಭಾಗದ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಎಸ್ಪಿ ಡಾ. ವಿಕ್ರಮ ಅಮಟೆ ಅವರಿಗೆ ಮನವಿ ಸಲ್ಲಿಸಿದರು.

    ಬಿಜೆಪಿ ಜಿಲ್ಲಾ ಕಚೇರಿಯಿಂದ ಎಸ್ಪಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಎಸ್ಪಿಗೆ ಮನವಿ ಸಲ್ಲಿಸಿದರು. ನನ್ನನ್ನೂ ಬಂಧಿಸಿ ಎಂದು ಒತ್ತಾಯಿಸಿ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದ ಸಿ.ಟಿ.ರವಿ ಫೋಟೋಗಳನ್ನು ವಿರೂಪಗೊಳಿಸಿ ನಾನು ಕುಡುಕ ನನ್ನನ್ನು ಬಂಧಿಸಿ ಎಂದು ತಿರುಚಿದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ಕಾಂಗ್ರೆಸಿಗರು ಪೋಸ್ಟರ್‌ಗಳನ್ನು ತಿರುಚುವ ಮೂಲಕ ಬಿಜೆಪಿ ನಾಯಕರ ತೇಜೋವಧೆಗೆ ಯತ್ನಿಸುತ್ತಿದ್ದಾರೆ. ಈ ಮೂಲಕ ಕೀಳುಮಟ್ಟದ ರಾಜಕಾರಣವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಿಜೆಪಿ ಮುಖಂಡರಾದ ಸಿ.ಟಿ.ರವಿ, ಸುನೀಲ್‌ಕುಮಾರ್, ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಇದನ್ನು ಬಿಟ್ಟು ಈ ನಾಯಕರ ಮೇಲೆ ತನಿಖೆ ನಡೆಸಿ ಅವರು ತಪ್ಪಿತಸ್ಥರು ಎಂದಾದಲ್ಲಿ ಅವರನ್ನು ಜೈಲಿಗೆ ಹಾಕಲಿ. ಅದನ್ನು ಬಿಟ್ಟು ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಬೇಕು. ಇಲ್ಲವೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
    ಮುಖಂಡರಾದ ರವೀಂದ್ರ ಬೆಳವಾಡಿ, ದೇವರಾಜ್ ಶೆಟ್ಟಿ, ಪ್ರೇಮ್‌ಕುಮಾರ್, ಪುಷ್ಪರಾಜ್, ಹಿರೇಮಗಳೂರು ಪುಟ್ಟಸ್ವಾಮಿ, ಮಧುರಾಜ್ ಅರಸ್, ಅಂಕಿತಾ, ಸಂತೋಷ್ ಕೋಟ್ಯಾನ್, ಸಚಿನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts