More

    ಹಬ್ಬ ಆಚರಣೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಮಕೈಗೊಳ್ಳಿ

    ಮೂಡಿಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಿಹಾದಿ ಮನಸ್ಥಿತಿ ಹೆಚ್ಚುತ್ತಿದೆ. ರಾಮನವಮಿ ಆಚರಣೆಗೂ ಅಡ್ಡಿಪಡಿಸಲಾಗುತ್ತಿದೆ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ತಾರೇಶ್ ಜೇನುಬೈಲ್ ಒತ್ತಾಯಿಸಿದರು.

    ಶುಕ್ರವಾರ ತಹಸೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆಯ ಬಾಬು ಮೂಲಕ ರಾಜ್ಯಪಾರಿಗೆ ಮನವಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ರಾಮನವಮಿ ಆಚರಿಸುತ್ತಿದ್ದ ವೇಳೆ ಹಿಂದುಗಳ ಕಾರನ್ನು ಜಿಹಾದಿ ಮನಸ್ಥಿತಿಯ ಯುವಕರು ಅಡ್ಡಗಟ್ಟಿ, ಹನುಮ ಧ್ವಜ ಕಿತ್ತು ಹಲ್ಲೆ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಿಂದುಗಳ ಮೇಲೆ ಹಲ್ಲೆ ಪ್ರಕರಣ ಹೆಚ್ಚುತ್ತಿದೆ. ಹಿಂದುಗಳು ಹಬ್ಬಗಳನ್ನು ಆಚರಿಸದಂತೆ ತಾಕೀತು ಮಾಡಲಾಗುತ್ತಿದೆ ಎಂದು ದೂರಿದರು.
    ಹಿಂದುಗಳು ಎಂದೂ ಮುಸ್ಲಿಮರ ಹಬ್ಬ ಹಾಗೂ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹುಬ್ಬಳ್ಳಿಯಲ್ಲಿ ಹಿಂದು ಯುವತಿಯ ಹತ್ಯೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆಸಲಾಗಿದೆ. ಪದೇ ಪದೆ ರಾಜ್ಯದಲ್ಲಿ ಅಮಾಯಕರ ಮೇಲೆ ಹಲ್ಲೆ ನಡೆಯುತ್ತಿದ್ದರೂ ಮುಸ್ಲಿಮರ ಮತ ಓಲೈಕೆಗಾಗಿ ರಾಜ್ಯ ಸರ್ಕಾರ ಗಲಭೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯದಲ್ಲಿ ಶಾಂತಿ ಕದಡದಂತೆ ಸರ್ಕಾರಕ್ಕೆ ರಾಜ್ಯಪಾಲರು ಚಾಟಿ ಬೀಸಬೇಕೆಂದು ಆಗ್ರಹಿಸಿದರು.
    ಶಶಿ, ಅವಿನಾಶ್, ಮನೋಜ್, ಬಾಲು ಶೆಟ್ಟಿ, ಅಭಿಷೇಕ್, ಪರೀಕ್ಷಿತ್ ಜಾವಳಿ, ಸಂತೋಷ್, ಸಚಿನ್ ಬಾನಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts