More

    ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮಕೈಗೊಳ್ಳಿ

    ರಾಯಚೂರು: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲ ಅಕಾರಿಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಸ್ಪೀಪ್ ನೋಡಲ್ ಅಕಾರಿ ಪಿ.ಎಸ್.ವಸದ್ ತಿಳಿಸಿದರು.
    ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಲೋಕಸಭೆ ಚುನಾವಣೆಯನ್ನು ಸುವ್ಯಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಅಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.
    ಮತಗಟ್ಟೆಗೆ ಆಗಮಿಸುವ ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಕುಡಿಯುವ ನೀರು, ಶೌಚಾಲಯ, ನೆರಳಿನ ವ್ಯವಸ್ಥೆ ಮಾಡಬೇಕು. ವಿಕಲಚೇತನರಿಗೆ ರ‌್ಯಾಂಪ್ ವ್ಯವಸ್ಥೆ ಮಾಡಬೇಕು. ಎಲ್ಲ ಮತದಾರರಿಗೆ ಮತದಾರರ ಮಾರ್ಗದರ್ಶಿ ಚೀಟಿ ತಲುಪಿಸಬೇಕು ಎಂದು ಸೂಚಿಸಿದರು.
    ಸಭೆಯಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಕಾರಿ ಡಾ.ಬಿ.ವೈ.ವಾಲ್ಮೀಕಿ, ತಹಸೀಲ್ದಾರ್ ಸುರೇಶ ವರ್ಮಾ, ಡಿಎಚ್‌ಒ ಡಾ.ಸುರೇಂದ್ರ ಬಾಬು, ಡಿಡಿಪಿಐ ಕೆ.ಡಿ.ಬಡಿಗೇರ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts