More

    ಕಾಡಾನೆಗಳ ಹಾವಳಿ ತಡೆಗೆ ಕ್ರಮವಹಿಸಿ

    ವಿರಾಜಪೇಟೆ: ತಾಲೂಕಿನ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪೊದುಕೋಟೆ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡನ್ನು ಅರಣ್ಯಕ್ಕೆ ಅಟ್ಟಲು ಕ್ರಮವಹಿಸಬೇಕು ಎಂದು ಆಗ್ರಹಿಸಿ ಪೊದುಕೋಟೆ ಗ್ರಾಮಸ್ಥರು ಸೋಮವಾರ ವಿರಾಜಪೇಟೆ ಉಪವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣ ಬಸಪ್ಪ ಬಿ.ಎಂ. ಮನವಿ ಸಲ್ಲಿಸಿದರು.

    ಕಳೆದ ಹಲವು ತಿಂಗಳಿಂದ ಈ ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ಕಾಫಿ, ಅಡಕೆ, ತೆಂಗು ಹಾಗೂ ಇತರ ಬೆಳೆಗಳನ್ನು ನಾಶಪಡಿಸುತ್ತಿವೆ. ಕಾಡಾನೆಗಳು ಈ ಭಾಗ ತೋಟಗಳಲ್ಲಿ ರಾಜಾರೋಷವಾಗಿ ಸುತ್ತಾಡುತ್ತಿರುವುದರಿಂದ ಗ್ರಾಮಸ್ಥರು ಹಾಗೂ ಶಾಲಾ- ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಭಯದಲ್ಲಿ ಸಂಚರಿಸುವಂತಾಗಿದೆ. ಮಿತಿಮೀರಿದ ಕಾಡಾನೆಗಳ ಹಾವಳಿಯಿಂದಾಗಿ ಕಾರ್ಮಿಕರು ಕೂಡ ಕೆಲಸಕ್ಕೆ ತೆರಳಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಯೋಜನೆ ರೂಪಿಸುವಂತೆ ಅರಣ್ಯ ಇಲಾಖೆಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಕ್ರಮವಹಿಸಿಲ್ಲ. ಕೂಡಲೇ ಆನೆಗಳ ಹಾವಳಿಗೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಗ್ರಾಮಸ್ಥರಾದ ಗಣಪತಿ, ಸುಬ್ಬಯ್ಯ, ವೀರಪ್ಪ, ಚಂಗಪ್ಪ, ಜಯರಾಂ, ವಿರಾಜಪೇಟೆ ಪ್ರಭಾರ ವಲಯ ಅರಣ್ಯಾಧಿಕಾರಿ ದೇವಯ್ಯ, ಉಪವಲಯ ಅರಣ್ಯ ಅಧಿಕಾರಿ ಮೋನಿಷಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts