ಗೋಕಾಕ: ಬೇಸಿಗೆಯಲ್ಲಿ ಜನ&ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಪರಿಸ್ಥಿತಿ ನಿರ್ವಹಿಸಬೇಕು. ಜತೆಗೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಇಲ್ಲಿಯ ಎನ್ಎಸ್ಎ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯತೆ ವಹಿಸಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಯಿರುವ ಮೂಡಲಗಿ ತಾಲೂಕಿನ ಹೊನಕುಪ್ಪಿ, ಲ್ಮೇಶ್ವರ ಹಾಗೂ ಸಿದ್ಧಾಪುರ ಹಟ್ಟಿ ಗ್ರಾಮಗಳಲ್ಲಿ ಈಗಾಗಲೇ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಟ್ಟುಕೊಂಡು ಸಮಸ್ಯೆ ಎದುರಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಜೂನ್&ಜುಲೈ ತಿಂಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಲೋಳಸುರ ಸೇತುವೆ ಮೇಲೆ 70 ಸಾವಿರ ಕ್ಯೂಸೆಕ್ ನೀರು ಬಂದರೆ ಟಪ್ರಭಾ ನದಿ ತೀರದ ಗ್ರಾಮಗಳಿಗೆ ಮತ್ತೊಮ್ಮೆ ತೊಂದರೆ ಎದುರಾಗಬಹುದು. ಹೀಗಾಗಿ, ಪ್ರವಾಹ ಭೀತಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಂಬಂಧಿಸಿದ ಅಧಿಕಾರಿಗಳು ಯಾವುದೇ ನೆಪವೊಡ್ಡದೇ ಪ್ರವಾಹ ಸ್ಥಿತಿ ನಿಭಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಪ್ರಯತ್ನದಿಂದ ಈಗಾಗಲೇ ಜನ&ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಟಪ್ರಭಾ ನದಿಗೆ ನೀರು ಬಿಡಲಾಗಿದೆ. ಮುಂದಿನ 10 ದಿನಗಳವರೆಗೆ ಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸಲಾಗಿದೆ ಎಂದು ವಿವರಿಸಿದರು.
ತಹಸೀಲ್ದಾರ್ಗಳಾದ ಮೋಹನ ಭಸ್ಮೆ, ಶಿವಾನಂದ ಬಬಲಿ, ತಾಪಂ ಇಒಗಳಾದ ಪರಶುರಾಮ ಗಸ್ತಿ, ಚಿನ್ನಣ್ಣವರ, ಸಿಪಿಐಗಳಾದ ಶ್ರೀಶೈಲ ಬ್ಯಾಕೂಡ, ಎಚ್.ಡಿ. ಮುಲ್ಲಾ , ಇಂಜಿನಿಯರ್, ಪಿಡಿಒ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.
ೋಟೋ:15ಜಿಕೆಕೆ1: ಗೋಕಾಕ ಪಟ್ಟಣದ ಎನ್ಎಸ್ಎ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ಮೋಹನ ಭಸ್ಮೆ, ಶಿವಾನಂದ ಬಬಲಿ ಇತರರಿದ್ದರು.
