More

    ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಿ

    ರಾಯಚೂರು: ವಿಕಲಚೇತನರಿಗಾಗಿ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ವಿಕಲಚೇತನರು ಮುಂದಾಗಬೇಕು ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ಹೇಳಿದರು.
    ಸ್ಥಳೀಯ ಕನ್ನಡ ಭವನದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ವಿಕಲಚೇತನರಿಗೆ ಮುಟ್ಟಿಸಲು ಅಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
    ವಿಕಲಚೇತನರು ತಮ್ಮ ಅಂಗವೈಕಲ್ಯವನ್ನು ಮೆಟ್ಟಿನಿಲ್ಲುವ ಮೂಲಕ ಸ್ವಾವಲಂಬಿಗಳಾಗಿ ಬದುಕಲು ಪ್ರಯತ್ನಿಸಬೇಕು. ಯೋಜನೆಗಳ ಲ ಪಡೆಯಲು ಯಾವುದೇ ಸಮಸ್ಯೆ ಎದುರಾದಲ್ಲಿ ಸಂಬಂಸಿದ ಅಕಾರಿಗಳನ್ನು ಭೇಟಿಯಾಗಿ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಮಾತನಾಡಿ, ವಿಕಲಚೇತನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡು ಮತದಾನದ ಹಕ್ಕು ಪಡೆಯಬೇಕು. ಮತಗಟ್ಟೆ ಮತ್ತು ಸರ್ಕಾರಿ ಕಚೇರಿಯಲ್ಲಿ ವಿಕಲಚೇತನರಿಗಾಗಿ ಸೌಕರ್ಯ ಕಲ್ಪಿಸಲಾಗಿದ್ದು, ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಮುಂದೆ ಬರಬೇಕು ಎಂದರು.
    ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ವಿಕಲಚೇತನರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ, ವಿಕಲಚೇತನರ ಕಲ್ಯಾಣಾಕಾರಿ ಶರಣಬಸವ ಪಾಟೀಲ್, ಶಿಶು ಅಭಿವೃದ್ಧಿ ಅಕಾರಿ ಮನ್ಸೂರ್ ಅಹ್ಮದ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts