More

    ನರೇಗಾ ಯೋಜನೆಯ ಸದುಪಯೋಗ ಪಡೆದುಕೂಳ್ಳಿ

    ನರೇಗಾ ಯೋಜನೆಯ ಸದುಪಯೋಗವನ್ನು ಪಲಾನುಭವಿಗಳು ಪಡೆದುಕೊಳ್ಳಬೇಕು ಎಂದು ಸಾಲಿಗ್ರಾಮ ಗ್ರಾಮ ಪಂಚಾಯಿತಿಯ ಪಿಡಿಓ ಮಂಜುನಾಥ್ ಅವರು ತಿಳಿಸಿದರು.

    ಸಾಲಿಗ್ರಾಮ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ರೋಜಗಾರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರೇಗಾ ಕೂಲಿಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಕುರಿತು ಜನರಿಗೆ ಅರಿವು ಮೂಡಿಸಿ ಸಾರ್ವಜನಿಕರು ಕೆಲಸಕ್ಕೆ ಬರುವಂತೆ ಪ್ರೇರೇಪಿಸಿದರು.

    ಗ್ರಾಮೀಣ ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಹಾಗೂ ಗ್ರಾಮೀಣ ಭಾಗದಲ್ಲಿಯೇ ಜೀವನ ನಿರ್ವಹಣೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನಗಳ ಕೆಲಸ ನೀಡುವ ಮೂಲಕ ತಮ್ಮ ಸ್ವಂತ ಗ್ರಾಮಗಳಲ್ಲಿ ಜನರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಕೆಲಸಕ್ಕೆ ಹೋಗುವ ಮೂಲಕ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.

    ನರೇಗಾ ಯೋಜನೆಯಡಿ ದಿನಕ್ಕೆ 316 ರೂಪಾಯಿ ಕೂಲಿ ಇದ್ದು, ಸಮಾನ ಕೂಲಿ ಸಮಾನ ವೇತನ, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯ ಕೂಲಿ ಕೆಲಸಕ್ಕೆ ಬರಲು ತಿಳಿಸಿದರು. ಕೂಲಿ ಕಾರ್ಮಿಕರು ಸ್ಥಳೀಯ ಗ್ರಾಮ ಪಂಚಾಯಿತಿಗೆ ನಮೂನೆ 06 ರಲ್ಲಿ ಕೂಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದಲ್ಲಿ ತಕ್ಷಣ ಕೂಲಿ ಕೆಲಸ ನೀಡಲಾಗುವುದು ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts