ರಜಾ ದಿನದ ಸದುಪಯೋಗ ಪಡೆದುಕೊಳ್ಳಿ

blank

ನಾಪೋಕ್ಲು: ವಿದ್ಯಾರ್ಥಿಗಳು ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡು ರಜಾ ದಿನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಏರ್‌ಫೋರ್ಸ್ ನಿವೃತ ಅಧಿಕಾರಿ ಕೊಂಡಿರ ಗಣೇಶ್ ನಾಣಯ್ಯ ಹೇಳಿದರು.
ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಇಲ್ಲಿಯ ಕೆಪಿಎಸ್ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 25ನೇ ವರ್ಷದ ಹಾಕಿ ಹಾಗೂ ಇನ್ನಿತರ ಬೇಸಿಗೆ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿರಿಯರಾದ ದಿ.ಕಲಿಯಂಡ ಸಾಬು ಅಯ್ಯಣ್ಣ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡಮಿ ಸ್ಥಾಪಿಸಿದ ಬಳಿಕ 25 ವರ್ಷಗಳಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು ಹಲವು ವಿದ್ಯಾರ್ಥಿಗಳು ತರಬೇತಿ ಪಡೆದು ಉನ್ನತ ಸ್ಥಾನ ಹೊಂದಿದ್ದಾರೆ. ಹಲವು ಕ್ರೀಡಾಪಟುಗಳಾಗಿ ಹೊರಹೊಮ್ಮಿದ್ದಾರೆ. ವಿದ್ಯಾರ್ಥಿಗಳ ಏಳಿಗೆಯಲ್ಲಿ ಪಾಲಕರ ಪಾತ್ರ ಮುಖ್ಯ. ತರಬೇತುದಾರರು ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ. ಅಭ್ಯಾಸದ ವೇಳೆ ಉತ್ತಮ ತರಬೇತಿಯನ್ನು ವಿದ್ಯಾರ್ಥಿಗಳು ಪಡೆದುಕೊಂಡು ಉನ್ನತಿಯನ್ನು ಸಾಧಿಸಬೇಕು ಎಂದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಅಕಾಡೆಮಿ ಸ್ಥಾಪಕ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಕ್ರೀಡಾ ಅಕಾಡೆಮಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳಿಗೆ ಹಾಕಿ ತರಬೇತಿ ಜತೆಗೆ ಸಾಂಸ್ಕೃತಿಕ ತರಬೇತಿಯನ್ನು ಅಕಾಡೆಮಿ ಮೂಲಕ ನೀಡಲಾಗುತ್ತಿದೆ. ಮಾತ್ರವಲ್ಲದೆ ಶಿಬಿರಾರ್ಥಿಗಳಿಗೆ ಅರ್ಹತಾ ಪತ್ರ ನೀಡಲಾಗುತ್ತದೆ. ಪ್ರತಿದಿನ ಹಾಲು, ಮೊಟ್ಟೆ, ಬಿಸ್ಕೆಟ್ ವಿತರಿಸುವುದರ ಮೂಲಕ ಶಿಬಿರವನ್ನು ಆಯೋಜಿಸಲಾಗುತ್ತಿದೆ.
ನುರಿತ ತರಬೇತುದಾರರಾದ ಅಕಾಡೆಮಿಯ ಕಾರ್ಯದರ್ಶಿ, ಮಾಜಿ ಸೈನಿಕ ಕೋಟೋಳಿರ ಡಾಲಿ ಅಪ್ಪಚ್ಚ ಹಾಗೂ ಕ್ರೀಡಾಪಟು ಅರೇಯಡ ಗಣೇಶ್ ಬೆಳ್ಳಿಯಪ್ಪ, ಬಿದ್ದಾಟಡ ಮಮತಾ ಚಿನ್ನಪ್ಪ, ಅಕಾಡೆಮಿ ಖಜಾಂಚಿ ಮಾಚೇಟಿರ ಕುಸು ಕುಶಾಲಪ್ಪ, ಅಕಾಡೆಮಿ ನಿರ್ದೇಶಕರಾದ ಕುಂಚೆಟ್ಟಿರ ಸುಧಿ ಪಾಲಕರು ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

blank
TAGGED:
Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…