More

  ಡೆಂಘೆ ಪೀಡಿತರ ಕಾಳಜಿ ವಹಿಸಿ

  ಸಾಗರ: ಡೆಂಘೆ ಜ್ವರ ಹೆಚ್ಚುತಿದೆ. ಆಸ್ಪತ್ರೆಗೆ ಬರುವ ರೋಗಿಗಳನ್ನು ವೈದ್ಯ ಸಿಬ್ಬಂದಿ ಹೆಚ್ಚು ಮುತುವರ್ಜಿಯಿಂದ ಶುಶ್ರೂಷೆ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.

  ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ವಾರ್ಡ್‌ಗಳಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ವಿಚಾರಿಸಿ ಮಾತನಾಡಿ, ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ದಿನ 20-30 ಡೆಂಘೆ ಪ್ರಕರಣ ದಾಖಲಾಗುತ್ತಿವೆ. ಆಸ್ಪತ್ರೆಯಲ್ಲಿ ಬೆಡ್ ಹಾಕಲು ಜಾಗ ಇಲ್ಲದೆ ತುರ್ತು ಸಂದರ್ಭದಲ್ಲಿ ಹೆಚ್ಚುವರಿ ಬೆಡ್ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
  ವೈದ್ಯ ಸಿಬ್ಬಂದಿ ರಜೆ ಹಾಕಬಾರದು. ಕೆಲ ವೈದ್ಯರು ಬೆಳಗ್ಗೆ 11ಗಂಟೆಯಾದರೂ ಕರ್ತವ್ಯಕ್ಕೆ ಹಾಜರಾಗದಿರುವುದು ನನ್ನ ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಇಬ್ಬರಿಗೆ ನೋಟಿಸ್ ನೀಡಲಾಗಿದೆ. ಇದೇ ಮುಂದುವರಿದರೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
  ಉತ್ತಮ ಆರೋಗ್ಯ ಸೇವೆ ಸಿಗುತ್ತದೆ ಎಂದು ಸೊರಬ, ಶಿಕಾರಿಪುರ, ಸಿದ್ದಾಪುರ, ಹಾವೇರಿ ಭಾಗದಿಂದಲೂ ತಪಾಸಣೆಗೆ ಬರುತ್ತಾರೆ. ಇದು ವೈದ್ಯರು ಮತ್ತು ಸಿಬ್ಬಂದಿ ಮೇಲೆ ಒತ್ತಡ ತರುತ್ತಿದೆ. ಆಯಾ ತಾಲೂಕಿನಲ್ಲಿ ಸೂಕ್ತ ವೈದ್ಯ ಸಿಬ್ಬಂದಿ ನೇಮಕ ಸಂಬಂಧ ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
  ಸಿವಿಲ್ ಸರ್ಜನ್ ಡಾ. ಕೆ.ಪರಪ್ಪ, ಸೋಮಶೇಖರ, ತಾರಾಮೂರ್ತಿ, ಅಶೋಕ, ರವಿಕುಮಾರ್ ಇದ್ದರು.

  See also  ಸಣ್ಣ ಕೈಗಾರಿಕೆ ಆರಂಭಕ್ಕೆ ಯುವಜನತೆ ಮುಂದಾಗಲಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts