More

    ಕುಡಿವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಿ

    • ಹಾಸನ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಎ.ಮಂಜು ಅಧಿಕಾರಿಗಳಿಗೆ ಸೂಚಿಸಿದರು.

    • ಅರಕಲಗೂಡು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒಗಳ ಸಭೆಯಲ್ಲಿ ಮಾತನಾಡಿದರು.
    • ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯ ಬಿದ್ದರೆ ಖಾಸಗಿ ಕೊಳವೆ ಬಾವಿಗಳನ್ನು ವಶಕ್ಕೆ ಪಡೆದು ನೀರು ಸರಬರಾಜಿಗೆ ಕ್ರಮ ವಹಿಸಬೇಕು. ನೀರು ಸಿಗದ ಕಡೆ ವೈಜ್ಞಾನಿಕ ರೀತಿಯಲ್ಲಿ ಪರೀಕ್ಷೆ ನಡೆಸಿ ಗ್ರಾಮದಿಂದ ನೂರು, ಇನ್ನೂರು ಮೀಟರ್ ಹೊರಗೆ ಬಾವಿ ಕೊರೆಸಿದರೂ ತೊಂದರೆ ಇಲ್ಲ. ಕೊಳವೆ ಅಳವಡಿಸಿ ನೀರು ಸರಬರಾಜು ಮಾಡಬಹುದು, ಜಲಜೀವನ ಮಿಷನ್ ಯೋಜನೆ ಅನುಷ್ಠಾನ ಹಂತದಲ್ಲಿದ್ದು, ಮುಂದಿನ ವರ್ಷ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ, ಈ ಬಾರಿ ಎಚ್ಚರ ವಹಿಸಿ ಸಮಸ್ಯೆ ಎದುರಾಗದಂತೆ ಪರಿಸ್ಥಿತಿ ನಿಭಾಯಿಸುವಂತೆ ಸೂಚಿಸಿದರು.

    • ಭಾವಚಿತ್ರ ಅನಾವರಣ:
      ಸಭೆಗೂ ಮುನ್ನ ಬಸವೇಶ್ವರರ ಭಾವಚಿತ್ರವನ್ನು ಅನಾವರಣಗೊಳಿಸಿದ ಶಾಸಕ ಮಂಜು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹವಾಗಿದೆ. ಬಸವೇಶ್ವರರ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸಮಸಮಾಜ ನಿರ್ಮಾಣ ಸಾಧ್ಯ. ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕಿದರಷ್ಟೆ ಸಾಲದು, ಅವರ ಕಾಯಕತತ್ವ, ಕಾಯಕ ನಿಷ್ಠೆಯನ್ನು ಅಳವಡಿಸಿಕೊಂಡು ಸಾರ್ವಜನಿಕರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿಕೊಡುವಂತೆ ತಿಳಿಸಿದರು.
    • ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ, ಶಿರಸ್ತೇದಾರ್ ಸಿ.ಸ್ವಾಮಿ, ಕಂದಾಯ ನಿರೀಕ್ಷಕ ಲೋಕೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts