More

    ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ; ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ

    ಧಾರವಾಡ: ರೇಣುಕಾಸಾಗರ ಜಲಾಶಯ ಹಾಗೂ ನೀರಸಾಗರದಿಂದ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಜಿಲ್ಲೆಯ ಕೆರೆಗಳನ್ನು ತುಂಬಿಸಲಾಗಿದ್ದು, ಕೆಲವೆಡೆ ಬೋರ್‌ವೆಲ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚಿಸಿದರು.
    ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ತ್ರೆಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
    ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಮುಖ್ಯ ಇಂಜಿನಿಯರ್ ಎನ್.ಎಸ್. ಭಜಂತ್ರಿ ಸಮರ್ಪಕ ಮಾಹಿತಿ ನೀಡಲಿಲ್ಲ. `ನೀವು ಸಭೆಗೆ ಬಂದೀರೋ, ಪಿಕ್‌ನಿಕ್ ಬಂದೀರೋ?. ಸಭೆಯಲ್ಲಿ ಕೇಳಿದ ಮಾಹಿತಿ ನೀಡಲು ತಡಕಾಡುತ್ತೀರಲ್ಲ’ ಎಂದು ಸಚಿವ ಲಾಡ್ ತರಾಟೆಗೆ ತೆಗೆದುಕೊಂಡರು. ಅವರಿಗೆ ನೋಟಿಸ್ ನೀಡಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.
    ಕೆಡಿಪಿ ಸಭೆಗೆ ಸಭೆಗೆ ಬರುವ ಮುನ್ನ ಎಲ್ಲ ಇಲಾಖೆಗಳ ಅಽಕಾರಿಗಳು ಪೂರ್ವತಯಾರಿ ಮಾಡಿಕೊಂಡಿರಬೇಕು. ವಿವಿಧ ಕಾಮಗಾರಿಗಳು ಮತ್ತು ಕಾರ್ಯಕ್ರಮಗಳ ವರದಿಗಳನ್ನು ಸಿದ್ಧಪಡಿಸಿಕೊಂಡು ಅಂಕಿ- ಅಂಶಗಳೊ0ದಿಗೆ ಹಾಜರಾಗಬೇಕು ಎಂದು ತಾಕೀತು ಮಾಡಿದರು.
    ಹುಬ್ಬಳ್ಳಿ ಫ್ಲೆಓವರ್ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಬೇಕು. ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಹೊಲದ ದಾರಿಗಳನ್ನು ನಿರ್ಮಿಸಬೇಕು. ಪಶು ಸಂಜೀವಿನಿ ಯೋಜನೆ ಬಗ್ಗೆ ಪ್ರಚಾರ ಮಾಡಬೇಕು. ಇದರಿಂದ ರೈತರ ಜಾನುವಾರಗಳಿಗೆ ಅನುಕೂಲವಾಗಲಿದೆ. ಎಲ್ ಆ್ಯಂಡ್ ಟಿ ಕಂಪನಿಯವರ ಕಾರ್ಯವೈಖರಿ ಚುರುಕುಗೊಳ್ಳಬೇಕು. ಸಭೆಗೆ ಮೇಲಾಽಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಕೈಗೊಂಡ ಯೋಜನೆಗಳ ಪ್ರಗತಿಯ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದರು.
    ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ಜಾನುವಾರುಗಳಿಗೆ ಅಗತ್ಯ ಲಸಿಕೆಗಳನ್ನು ಹಾಕಬೇಕು. ಕಾಮಧೇನು, ಅನುಗ್ರಹ ಯೋಜನೆಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು. ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಹಾಯಧನ ನೀಡಬೇಕು. ಮಳೆ ಕೊರತೆಯಿಂದ ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
    ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ರೈತರಿಗೆ ಗದಗ, ಹಾವೇರಿ ಜಿಲ್ಲೆಗಳಂತೆ ಮಧ್ಯಂತರ ಬೆಳೆ ವಿಮೆ ಪರಿಹಾರ ಒದಗಿಸಬೇಕು ಎಂದರು.
    ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಯಾರ್, ಎಸ್‌ಪಿ ಡಾ. ಗೋಪಾಲ ಬ್ಯಾಕೋಡ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts