More

    ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ

    ಬಳ್ಳಾರಿ : ಇಂದಿನ ತಂತ್ರಜ್ಞಾನ ಯುಗದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ್ ಬಾಬು ಹೇಳಿದರು.

    ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಮುಂಭಾಗದಲ್ಲಿ ಭಾರತೀಯ ಕುಟುಂಬ ಯೋಜನಾ ಸಂಸ್ಥೆ(ಎಫ್.ಪಿ.ಎ.ಐ), ರೆಡ್‌ಕ್ರಾಸ್ ಸಂಸ್ಥೆ ಮತ್ತು ಜಿಲ್ಲಾಸ್ಪತ್ರೆ ಸಂಯುಕ್ತಾಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

    ಸಾರ್ವಜನಿಕರು ಕ್ಯಾನ್ಸರ್ ಕಾಯಿಲೆ ಬಗ್ಗೆ ಮುಂಜಾಗ್ರತಾ ಕ್ರಮವಹಿಸಬೇಕು. 30 ವರ್ಷ ಮೇಲ್ಪಟ್ಟ ಮಹಿಳೆಯರು ಮೂರು ವರ್ಷಗಳಿಗ್ಮೊಮ್ಮೆ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್‌ನ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು. ವಿಮ್ಸ್‌ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಪ್ರತ್ಯೇಕವಾದ ಚಿಕಿತ್ಸಾ ಘಟಕವಿದ್ದು ಅದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

    ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಮಾತನಾಡಿ, ಈ ಹಿಂದೆ ಕ್ಯಾನ್ಸರ್ ಚಿಕಿತ್ಸೆ ಮತ್ತು ಲಸಿಕೆ ಕುರಿತು ಹೆಚ್ಚಿನ ಸಂಶೋಧನೆಗಳಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿತ್ತು. ಇಂದು ಅಧುನಿಕ ಜೀವನ ಶೈಲಿಗಳಿಂದ ತಂಬಾಕು ಬಳಕೆಯಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಪ್ರಸುತ್ತ ಆಧುನಿಕ ತಂತ್ರಜ್ಞಾನದಿಂದ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತಗಳಲ್ಲಿ ಪತ್ತೆಮಾಡಿ ಖಚಿತ ಪಟ್ಟಲ್ಲಿ ಸಂಪೂರ್ಣವಾಗಿ ಚಿಕಿತ್ಸೆ ನೀಡಿ ಗುಣಮುಖಗೊಳಿಸಬಹುದು. ಅದರಿಂದ ಸಾರ್ವಜನಿಕರು ಜಾಗೃತರಾಗಿ ಕ್ಯಾನ್ಸರ್ ಲಕ್ಷಣಗಳಿನುಸಾರವಾಗಿ ತಪಾಸಣೆಯನ್ನು ಮಾಡಿಕೊಂಡು ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕೆಂದು ವಿನಂತಿಸಿದರು.

    ಜಾಗೃತಿ ಜಾಥಾವೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆವರಣದಿಂದ ಸಂಗಮ್ ಸರ್ಕಲ್, ರಾಯಲ್ ಸರ್ಕಲ್ ಮೂಲಕ ಡಿಎಚ್‌ಒ ಕಚೇರಿ ಆವರಣದವರೆಗೆ ಸಂಚರಿಸಿತು. ಮಾರ್ಗದಲ್ಲಿ ಗುಲಾಬಿ ಹೂವು ಹಾಗೂ ಕರಪತ್ರಗಳನ್ನು ಸಾರ್ವಜನಿಕಾರಿಗೆ ಕ್ಯಾನ್ಸರ್ ರೋಗದ ಕುರಿತು ಹಾಗೂ ತಂಬಾಕು ದುಷ್ಟರಿಣಾಮ ಕುರಿತು ಅರಿವು ಮೂಡಿಸಲಾಯಿತು. ಸೆಕ್ಷನ್(6ಎ)ಪ್ರಕಾರ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವೆಂದು ತಿಳಿಸಲಾಯಿತು.

    ಜಿಲ್ಲಾ ಆರ್‌ಸಿಎಚ್ ಡಾ.ಅನಿಲ್ ಕುಮಾರ್, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಕುಟುಂಬ ಕಲ್ಯಾಣ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾ ಕಾರ್ಯಕ್ರಮದ ಸಂಯೋಜಕಿ ಡಾ.ಜಬೀನ್ ತಾಜ್ ಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ರೆಡ್‌ಕ್ರಾಸ್ ಸಂಸ್ಥೆಯ ಹರಿ ಶಂಕರ್, ವಿಜಯಲಕ್ಷ್ಮೀ, ಮಲ್ಲೇಶ್‌ಪ್ಪ .ಎಸ್ , ವಿಮ್ಸ್ ನರ್ಸಿಂಗ್ ವಿದ್ಯಾರ್ಥಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts