More

    ಕನ್ನಡ ತಪ್ಪಾಗಿ ಬರೆದು ಸರ್ಕಾರಿ ಆದೇಶ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್​ ಆಗ್ರಹ..

    ಚಿತ್ರದುರ್ಗ: ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ-ವೀಡಿಯೋ ಮಾಡದಂತೆ ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಆದರೆ ಈ ಆದೇಶದಲ್ಲಿನ ಹಲವು ತಪ್ಪುಗಳಿಂದಾಗಿ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನು ಗಮನಿಸಿದ ಸರ್ಕಾರ ಬಳಿಕ ಪರಿಷ್ಕೃತ ಆದೇಶ ಹೊರಡಿಸಿತ್ತು.

    ಹೀಗೆ ಸರ್ಕಾರಿ ಉದ್ಯೋಗಿಗಳಿಂದಲೇ ಕನ್ನಡಕ್ಕೆ ಅವಮಾನ ಆಗಿದ್ದರ ವಿರುದ್ಧ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದ್ದರಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಂಥ ಅಧಿಕಾರಿ/ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ನಿನ್ನೆಯಷ್ಟೇ ಆಗ್ರಹಿಸಿತ್ತು. ಇದು ಕನ್ನಡ ಸಾಹಿತ್ಯ ಪರಿಷತ್ ಕೂಡ ದನಿ ಎತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸಬೇಕು ಎಂದು ಆಗ್ರಹಿಸಿದೆ.

    ಕನ್ನಡ ತಪ್ಪಾಗಿ ಬರೆದು ಸರ್ಕಾರಿ ಆದೇಶ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್​ ಆಗ್ರಹ..ವ್ಯಾಕರಣ, ಕಾಗುಣಿತ ತಪ್ಪಾಗಿರುವ ಆದೇಶಕ್ಕೆ ಸಹಿ ಮಾಡಿದ ಅಧಿಕಾರಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಸಾಪ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಒತ್ತಾಯಿಸಿದ್ದಾರೆ. ಸರ್ಕಾರ ಶುಕ್ರವಾರ ಹೊರಡಿಸಿರುವ ಆದೇಶ ಪ್ರತಿಯಲ್ಲಿ ಕಾಗುಣಿತದ ತಪ್ಪುಗಳು ತುಂಬಾ ಆಗಿದ್ದು, ತಪ್ಪುಗಳನ್ನು ಹೊಂದಿರುವ ಆದೇಶದ ಪ್ರತಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂಥ ಆದೇಶ ಪ್ರತಿಗೆ ಸಹಿ ಮಾಡಿದ ಅಧಿಕಾರಿ, ಪರಿಶೀಲನೆ ನಡೆಸಿದ ಗುಮಾಸ್ತರು ಸೇರಿ ಎಲ್ಲರ ವಿರುದ್ಧ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಆದೇಶಗಳು ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಕನ್ನಡ ತಪ್ಪಾಗಿ ಬರೆದು ಸರ್ಕಾರಿ ಆದೇಶ; ಸಂಬಂಧಿತರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ..

    ಮಧ್ಯರಾತ್ರಿ ನಿದ್ದೆಗಣ್ಣಿನಲ್ಲಿ ಸರ್ಕಾರ ಹೊರಡಿಸಿಬಿಡ್ತಾ ಆದೇಶ? ದೇವ್ರೇ ನೀನೇ ಕನ್ನಡ ಕಾಪಾಡಪ್ಪ ಅಂತಿದ್ದಾರೆ ನೆಟ್ಟಿಗರು!

    ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts