More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಕ್ರಮಕೈಗೊಳ್ಳಿ

    ರಾಯಚೂರು: ಜಿಲ್ಲೆಯಲ್ಲಿ ಮಾ.25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅಕಾರಿಗಳಿಗೆ ಸೂಚಿಸಿದರು.
    ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಜವಾಬ್ಧಾರಿಯುತವಾಗಿ ಕೆಲಸ ನಿರ್ವಹಿಸಬೇಕು ಎಂದರು.
    ಜಿಲ್ಲೆಯಲ್ಲಿ 93 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 32,996 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ತಲಾ 93 ಮುಖ್ಯ ಅೀಕ್ಷಕ, ಅೀಕ್ಷಕ ಹಾಗೂ ಸ್ಥಾನಿಕ ಜಾಗೃತದಳದ ಅಕಾರಿಗಳನ್ನು, 38 ಮಾರ್ಗಾಕರಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.
    ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಬಿಡಬಾರದು. ಎಲ್ಲ ಪರೀಕ್ಷಾ ಕೊಠಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ, ಜಿಲ್ಲಾ ಸ್ಪೀಪ್ ನೋಡಲ್ ಅಕಾರಿ ಡಾ.ಬಿ.ವೈ.ವಾಲ್ಮೀಕಿ, ಡಿಡಿಪಿಐ ಕೆ.ಡಿ.ಬಡಿಗೇರ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts